ಕೃಷ್ಣಾ ಜಲ ವಿವಾದ ನ್ಯಾಯಾಧೀಕರಣ-2 ಅವಧಿ ವಿಸ್ತರಣೆ: ಸಚಿವ ಎಚ್‌ ಕೆ ಪಾಟೀಲ್‌ ಆಕ್ಷೇಪ

ಬೆಂಗಳೂರು: ಕೃಷ್ಣಾ ಜಲ ವಿವಾದ ನ್ಯಾಯಾಧೀಕರಣ-2 (ಬ್ರಿಜೇಶ್ ಕಮಾರ್ ಆಯೋಗ) ಅವಧಿಯನ್ನು ಮತ್ತೊಂದು ವರ್ಷ ವಿಸ್ತರಿಸಿರುವ ಕೇಂದ್ರ ಸರ್ಕಾರದ ಕ್ರಮವು, ಇತ್ಯರ್ಥವಾಗಿರುವ ಜಲ ವಿವಾದದಲ್ಲಿ ನ್ಯಾಯ ಅಪೇಕ್ಷಿಸುತ್ತಿದ್ದ ಕರ್ನಾಟಕಕ್ಕೆ ಆಘಾತ ತಂದಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ. ಪಾಟೀಲ್‌ ಹೇಳಿದ್ದಾರೆ.

ಕೃಷ್ಣ ಜಲ ವಿವಾದ ನ್ಯಾಯಾಧೀಕರಣ-2 ಅಂತಿಮ ತೀರ್ಪನ್ನು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಬೇಕೆಂದು ಕರ್ನಾಟಕ ಕಳೆದ ಹತ್ತು ವರ್ಷಗಳಿಂದ ಒತ್ತಾಯ ಮಾಡುತ್ತಿದೆ. ಕೇಂದ್ರ ಸರ್ಕಾಟ ಗೆಜೆಟ್ನಲ್ಲಿ ಪ್ರಕಟಣೆ ಮಾಡದೇ ಇರುವುದರಿಂದ 200 ಟಿಎಂಸಿ ಕರ್ನಾಟಕದ ಪಾಲಿನ ನೀರು ರಾಜ್ಯಕ್ಕೆ ದಕ್ಕದೇ ಬಹುದೊಡ್ಡ ಅನ್ಯಾಯಕ್ಕೆ ಕಾರಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ಕೂಡಲೇ ಅವಧಿ ವಿಸ್ತರಣೆಯನ್ನು ಮರಳಿ ಪಡೆಯಬೇಕು. ಇಲ್ಲವೇ ಗೆಜೆಟ್ನಲ್ಲಿ ಪ್ರಕಟಿಸಲು ನ್ಯಾಯ ಯುತ ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ಸರ್ಕಾರ ಒತ್ತಾಯಿಸುತ್ತದೆ ಎಂದೂ ಹೇಳಿದ್ದಾರೆ.

More articles

Latest article

Most read