ತಲಾ ಆದಾಯದಲ್ಲಿ ಕರ್ನಾಟಕ ನಂ.1: ಗ್ಯಾರಂಟಿ ಯೋಜನೆಗಳೇ ಕಾರಣ: ಸುರ್ಜೇವಾಲ ಅಭಿಮತ

Most read

ಬೆಂಗಳೂರು: ರಾಜ್ಯದಲ್ಲಿ ತಲಾ ಆದಾಯ ಪ್ರಮಾಣ ರೂ.2,04,605 ದಾಟಿದ್ದು, ದೇಶದಲ್ಲೇ ಕರ್ನಾಟಕ ಅತಿ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ ಎಂದು ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಅಭಿಪ್ರಾಯಪಟ್ಟಿದ್ದಾರೆ.

2024-25ನೇ ಹಣಕಾಸು ವರ್ಷದಲ್ಲಿ ಕರ್ನಾಟಕವು ದೇಶದಲ್ಲೇ ಅತಿ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ಹಣಕಾಸು ಸಚಿವಾಲಯ ನಿನ್ನೆ ಲೋಕಸಭೆಯಲ್ಲಿ ಮಂಡಿಸಿದ ಅಂಕಿಅಂಶಗಳಿಂದ ಈ ವಿಷಯ ತಿಳಿದು ಬಂದಿದೆ.

ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಈ ಸಂಬಂಧ ಪೋಸ್ಟ್‌ ವೊಂದನ್ನು ಹಂಚಿಕೊಂಡಿರುವ ಅವರು, ಈ ಸಾಧನೆಗೆ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳೇ ಕಾರಣವಾಗಿವೆ. ಕಾಂಗ್ರೆಸ್ ಸರ್ಕಾರದ ದೂರದೃಷ್ಟಿಯ ಆರ್ಥಿಕ ನೀತಿಗಳು ಮತ್ತು ಸಾಮಾನ್ಯ ನಾಗರಿಕರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ಗ್ಯಾರಂಟಿ ಯೋಜನೆಗಳು ನೇರ ಪರಿಣಾಮ ಬೀರಿವೆ ಎಂದಿದ್ದಾರೆ.

ಗ್ಯಾರಂಟಿ ಯೋಜನೆಗಳು ರಾಜ್ಯವನ್ನು ದಿವಾಳಿ ಮಾಡುತ್ತವೆ ಎಂದು ಬಿಜೆಪಿ ನಾಯಕರು ಸುಳ್ಳು ಪ್ರಚಾರ ಮಾಡುತ್ತಿದ್ದರು. ಆದರೆ ಈಗ ಕೇಂದ್ರ ಹಣಕಾಸು ಸಚಿವಾಲಯದ ದತ್ತಾಂಶಗಳು ಅವರ ಪ್ರತಿಪಾದನೆಯ ಪೊಳ್ಳುತನವನ್ನು ಬಹಿರಂಗಪಡಿಸಿವೆ ಎಂದು ಅವರು ಹೇಳಿದ್ದಾರೆ.

More articles

Latest article