ಕೆ ಆರ್‌ ಎಸ್‌ ನಲ್ಲಿ ವೈಭವದ ಕಾವೇರಿ ಆರತಿಗೆ ಸಿದ್ಧತೆ:  ಅನುಷ್ಠಾನ ಸಮಿತಿ ರಚನೆ

Most read

ಬೆಂಗಳೂರು: ದಸರಾ ಹಬ್ಬದ ಸಂಧರ್ಭದಲ್ಲಿ ಕೆ ಆರ್‌ ಎಸ್‌ ನಲ್ಲಿ ವೈಭವದ ಕಾವೇರಿ ಆರತಿಯನ್ನು ನಡೆಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. “ಕೃಷ್ಣರಾಜಸಾಗರದಲ್ಲಿ ಕಾವೇರಿ ಆರತಿ ನಡೆಸಲು ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ರಚಿಸಿರುವ ಸಮಿತಿಯ ಶಿಫಾರಸ್ಸುಗಳ ಅನುಷ್ಠಾನ ಸಮಿತಿ” ಯನ್ನು ರಚಿಸಿದ್ದು, ಇದಕ್ಕಾಗಿ 92 ಕೋಟಿ ರೂಪಾಯಿಗಳ ಅನುದಾನವನ್ನು ನೀಡಿದೆ.

ವಿಶ್ವವಿಖ್ಯಾತ ದಸರಾ ಹಬ್ಬಕ್ಕೆ ಮತ್ತಷ್ಟು ಮೆರಗು ನೀಡುವ ನಿಟ್ಟಿನಲ್ಲಿ ರಾಜ್ಯದ ಜೀವನದಿ ಕಾವೇರಿ ಮಾತೆಗೆ ನಮನ ಹಾಗೂ ಪೂಜೆ ಸಲ್ಲಿಸಲು “ಕಾವೇರಿ ಆರತಿ”ಯನ್ನು ಆಯೋಜಿಸಲು ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು, ಮಾನ್ಯ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದರು. ಈ ಸಮಿತಿಯ ನೀಡಿರುವ ಶಿಫಾರಸ್ಸುಗಳನ್ನು ಸಮಪರ್ಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ, ಹಂಪಿಯಲ್ಲಿ ತುಂಗಾ ಆರತಿ, ಬೆಂಗಳೂರು ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿಯನ್ನು ಯಶಸ್ವಿಯಾಗಿ ನಡೆಯುವಲ್ಲಿ ಪ್ರಮುಖ ಪಾತ್ರವಹಿಸಿದ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷ ಡಾ ರಾಮ್‌ ಪ್ರಸಾತ್‌ ಮನೋಹರ್‌ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ.

ರಾಜ್ಯದ ಜೀವನದಿ ಕಾವೇರಿ ಮಾತೆಗೆ ನಮನ ಹಾಗೂ ಪೂಜೆ ಸಲ್ಲಿಸುವಂತಹ “ಕಾವೇರಿ ಆರತಿ” ಕಾರ್ಯಕ್ರಮದ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಧನ್ಯವಾದಗಳು. ನಮ್ಮ ತಂಡದ ಮೇಲೆ ವಿಶ್ವಾಸವಿಟ್ಟು ಇಂತಹ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ. ಕಾವೇರಿ ಮಾತೆಗೆ ನಮನ ಸಲ್ಲಿಸುವಂತಹ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌ ಅವರ ಮಹತ್ವಾಕಾಂಕ್ಷೆಯ ಕನಸಿನ ಯೋಜನೆಯನ್ನು ವಿಜ್ರಂಭಣೆಯಿಂದ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ನಮ್ಮ ತಂಡ ಕಾರ್ಯನಿರ್ವಹಿಸಲಿದೆ. ಅತ್ಯಂತ ವಿಜೃಂಭಣೆಯಿಂದ  ಈ ಕಾರ್ಯಕ್ರಮವನ್ನು ನಡೆಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ನಡೆಸಲಾಗುವುದು ಎಂದು ಡಾ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

More articles

Latest article