ಹರಿ ಹರ ಬ್ರಹ್ಮ ಬಂದರೂ ನಾನು ಚುನಾವಣೆ ಸ್ಪರ್ಧಿಸುವುದು ನಿಶ್ಚಿತ: ಏಪ್ರಿಲ್ 12ರಂದು ಕೆಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಪುತ್ರ ಕಾಂತೇಶ್ಗೆ ಹಾವೇರಿ ಲೋಕಸಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ಕೋಪಕೊಂಡಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ. ಅಲ್ಲದೇ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಸಹ ನಿಗದಿ ಮಾಡಿದ್ದಾರೆ.

ಶಿವಮೊಗ್ಗ ನಗರದಲ್ಲಿ ಬೆಂಬಲಿಗರ ಸಮಾವೇಶದಲ್ಲಿ ಮಾತನಾಡಿದ ಈಶ್ವರಪ್ಪ, ಹರಿ ಹರ ಬ್ರಹ್ಮ ಬಂದರೂ ನಾನು ಚುನಾವಣೆಗೆ ಸ್ಪರ್ಧಿಸುವುದು ನಿಶ್ಚಿತ. ಏಪ್ರಿಲ್ 12 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. 25 ಸಾವಿರ ಜನರೊಂದಿಗೆ ಬಂದು ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರಿಗೆ ಸೋಲಿನ ಭಯ ಶುರುವಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿವೈ ವಿಜಯೇಂದ್ರ ಗೆಲುವಿಗಾಗಿ ಹೊಂದಾಣಿಕೆ ರಾಜಕಾರಣ ಮಾಡಿದ್ದರು. ಹೀಗಾಗಿ ಕಾಂಗ್ರೆಸ್ನಿಂದ ಡಮ್ಮಿ ಅಭ್ಯರ್ಥಿ ಹಾಕಿದ್ದರು. ಲೋಕಸಭೆ ಚುನಾವಣೆಗೂ ಸಚಿವ ಮಧು ಬಂಗಾರಪ್ಪ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದು, ಆ ಪಕ್ಷದಿಂದ ಡಮ್ಮಿ ಅಭ್ಯರ್ಥಿ ಹಾಕಲಾಗಿದೆ. ಆದರೆ, ಈ ಬಾರಿ ಹೊಂದಾಣಿಕೆ ರಾಜಕಾರಣ ಯಶ್ವಿಯಾಗುವುದಿಲ್ಲ. ನಾನು 1 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಹೇಳಿದ್ದಾರೆ.

More articles

Latest article

Most read