ಕಾಲ್ತುಳಿತ ಪ್ರಕರಣ: ರಾಜ್ಯ ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ಶಂಕರ್ ಮತ್ತು ಖಜಾಂಚಿ ಜೈರಾಮ್ ರಾಜೀನಾಮೆ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ ಸಿಬಿ) ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತಕ್ಕೆ 11 ಜನ ಮೃತಪಟ್ಟ ಪ್ರಕರಣದ ನೈತಿಕ ಹೊಣೆ ಹೊತ್ತು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ ಸಿಎ) ಕಾರ್ಯದರ್ಶಿ ಶಂಕರ್ ಮತ್ತು ಖಜಾಂಚಿ ಎ ಇ ಎಸ್ ಜೈರಾಮ್ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ಗುರುವಾರ ರಾತ್ರಿಯೇ ಕೆಎಸ್‌ ಸಿಎ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಜಂಟಿ ಹೇಳಿಕೆಯಲ್ಲಿ ಶಂಕರ್ ಮತ್ತು ಜೈರಾಮ್ ತಿಳಿಸಿದ್ದಾರೆ.

ಸಂಭ್ರಮಾಚರಣೆ ನಡೆದ ದಿನ ಮತ್ತು ನಂತರ ನಡೆದ ಅನಿರೀಕ್ಷಿತ ಮತ್ತು ದುರದೃಷ್ಟಕರ ಘಟನೆಗಳಲ್ಲಿ ನಮ್ಮ ಪಾತ್ರ ಬಹಳ ಸೀಮಿತವಾಗಿದ್ದರೂ, ನಾವು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇವೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೆಎಸ್‌ ಸಿಎ ಅಧ್ಯಕ್ಷ ರಘುರಾಮ್ ಭಟ್, ಶಂಕರ್ ಮತ್ತು ಜಯರಾಮ್ ಅವರು ಹೈಕೋರ್ಟ್ ಗೆ ಪ್ರತಿಕ್ರಿಯೆ ನೀಡಿ, ಚಿನ್ನಸ್ವಾಮಿ ಸ್ಟೇಡಿಯಂನ ಗೇಟ್ ನಿರ್ವಹಣೆ ಮತ್ತು ಜನಸಂದಣಿ ನಿರ್ವಹಣೆ ಸಂಘದ ಜವಾಬ್ದಾರಿ ಆಗಿರುವುದಿಲ್ಲ ಎಂದು ತಿಳಿಸಿದ್ದಾರೆ.

ಕೆಎಸ್‌ ಸಿಎ ಅಧ್ಯಕ್ಷ  ಬ್ರಿಜೇಶ್ ಪಾಟೀಲ್ ನೇತೃತ್ವದಲ್ಲಿ  ಪದಾಧಿಕಾರಿಗಳ ಸಭೆ ನಡೆದಿತ್ತು. ಈ ಸಭೆಯಲ್ಲಿ ಇವರ ವಿರುದ್ಧ ಆಕ್ರೋಶ ಉಂಟಾಗಿತ್ತು. ಅಧ್ಯಕ್ಷರು ಮತ್ತು ಇತರ ಪದಾಧಿಕಾರಿಗಳ ಒತ್ತಡಕ್ಕೆ ಮಣಿದು ರಾಜೀನಾಮೆ ನೀಡಿದ್ದಾರೆ. ಹೈಕೋರ್ಟ್ ಇವರ ಬಂಧನಕ್ಕೆ ತಡೆ ನೀಡಿದ ನಂತರ ಅಧ್ಯಕ್ಷ  ಬ್ರಿಜೇಶ್ ಪಾಟೀಲ್ ಸಭೆ ನಡೆಸಿ ರಾಜೀನಾಮೆಗೆ ಸೂಚನೆ ನೀಡಿದ್ದರು ಎನ್ನಲಾಗಿದೆ.

More articles

Latest article

Most read