Saturday, December 7, 2024

KSOUನಲ್ಲಿ ಓದಲು ಬಯಸುವವರಿಗೆ ಗುಡ್ ನ್ಯೂಸ್ : ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದ ಕರ್ನಾಟಕ ರಾಜ್ಯ ಮುಕ್ತ ವಿವಿ

Most read

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ವತಿಯಿಂದ 2023-24ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ www.ksoumysuru.ac.in ದಲ್ಲಿ ಲಭ್ಯವಿರುವ ವಿವರಣಾ ಪುಸ್ತಕದಲ್ಲಿ ಎಲ್ಲಾ ವಿವರಗಳು ನೀಡಿದ್ದು, ಆಸಕ್ತ ಅರ್ಹ ವಿದ್ಯಾರ್ಥಿಗಳು ಅರ್ಜಿ ಹಾಕಬಹುದು ಎಂದು ಹೇಳಿದೆ.

ಆನ್ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಅಥವಾ ಖುದ್ದು ಅಗತ್ಯ ದಾಖಲಾತಿಗಳೊಂದಿಗೆ ಬೆಂಗಳೂರು ಪ್ರಾದೇಶಿಕ ಕೇಂದ್ರ-೦1, ಬಾಪೂಜಿನಗರ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಪ್ರವೇಶಾತಿ ಪರ್ಣ ಪ್ರಕ್ರಿಯೆಯನ್ನು ಮಾಡಿಕೊಳ್ಳಬಹುದಾಗಿದೆ.

ಸದ್ಯ B.A./ B.Com./ B.Sc./ B.B.A./ B.C.A./ B.S.W./ B.Lib.I.Sc./ M.A./ M.Sc./ M.B.A./ M.LiB.I.Sc./ M.C.A./ M.S.W./ PG Certificate/ Diploma/ UG Certificate ಶಿಕ್ಷಣಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

More articles

Latest article