ದಸರಾ ಪ್ರಯುಕ್ತ KSRTCಯಿಂದ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ

Most read

ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 9ರಿಂದ 12ರವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರಿನಿಂದ ರಾಜ್ಯ ಮತ್ತು ಅಂತರ್‌ರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.

ರಾಜ್ಯ ಹಾಗೂ ದೇಶದ ವಿವಿಧೆಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರು ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮ, ಪ್ರಸ್ತುತ ಕಾರ್ಯಾಚರಿಸುತ್ತಿರುವ ವೇಗದೂತ, ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ಲೀಪರ್, ಅಶ್ವಮೇಧ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್‌ ಸೌಲಭ್ಯ ಒದಗಿಸಲು ಕ್ರಮ ಕೈಗೊಂಡಿದೆ.

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಈ ಬಸ್‌ಗಳು ಹೊರಡಲಿವೆ. ನಂತರ ರಾಜ್ಯದ ಮತ್ತು ಅಂತರ್‌ರಾಜ್ಯದ ವಿವಿಧ ಸ್ಥಳಗಳಿಂದ ವಾಪಸ್​ ಬೆಂಗಳೂರಿಗೆ ಬರಲು 13/10/2024ರಿಂದ 14/10/2024ರವರೆಗೆ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್ಆರ್​ಟಿಸಿ ಪ್ರಕಟಣೆ ತಿಳಿಸಿದೆ.

More articles

Latest article