ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ತೆರಳಿದ್ದಾರೆ.
ಹೃದಯ ತಪಾಸಣೆಗೆ ಅವರು ಚೆನ್ನೈ ಅಪೊಲೋ ಆಸ್ಪತ್ರೆಗೆ ಹೋಗಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ಕಳೆದ ಬಾರಿಯೂ ಅವರು ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲೇ ತಪಾಸಣೆಗೆ ಒಳಗಾಗಿದ್ದರು. ಕಳೆದ ಒಂದು ವಾರದಿಂದ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು ಬೆಂಗಳೂರಿನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಚೆನ್ನೈನಲ್ಲಿ ತಪಾಸಣೆಗೊಳಗಾಗಿ ಇಂದು ಅಥವಾ ನಾಳೆ ಬೆಂಗಳೂರಿಗೆ ಮರಳಲಿದ್ದಾರೆ.
ಕೇಂದ್ರ ಸಚಿವರಾದ ಬಳಿಕ ನಿರಂತರ ಪ್ರವಾಸ ಹಾಗೂ ಕೆಲಸದ ಒತ್ತಡದಿಂದ.ಕುಮಾರಸ್ವಾಮಿ ಅವರು ಬಳಲಿದ್ದಾರೆ ಎಂದು ವೈದ್ಯರು ಹೇಳಿದ್ದರು.

                                    