ಬೆಳಗಾವಿ: ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಬೆಳಗಾವಿಯ ಮತ್ತೊಬ್ಬರು ಮೃತರಾಗಿದ್ದಾರೆ. ಈ ಮೂಲಕ ಇದುವರೆಗೆ ಬೆಳಗಾವಿಯ ಮೂವರು ಕುಂಭಮೇಳದಲ್ಲಿ ಅಸುನೀಗಿದ್ದಾರೆ. ಬೆಳಗಾವಿಯ ಶೆಟ್ಟಿಗಲ್ಲಿಯ ಅರುಣ್ ಕೋರ್ಪಡೆ ಮೃತ ದುರ್ದೈವಿ. ಇವರು ಪತ್ನಿಯ ಜತೆ ಕುಂಭಮೇಳಕ್ಕೆ ತೆರಳಿದ್ದರು. ಇಂದು ಬೆಳಗ್ಗೆ ಕಾಲ್ತುಳಿತಕ್ಕೆ ಸಿಲುಕಿ ಅಸುನೀಗಿದ್ದಾರೆ. ಇವರ ಪತ್ನಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ತಿಳಿದು ಬಂದಿದೆ.
ಈಗಾಗಲೇ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ (18) ಮೃತಪಟ್ಟಿದ್ದಾರೆ ಎಂದು ಮೃತರ ಸಂಬಂಧಿ ಗುರುರಾಜ ಹುದ್ದಾರ ತಿಳಿಸಿದ್ದಾರೆ.