ಪ್ರಯಾಗರಾಜ್: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ನಡೆದ ಸ್ಥಳದಿಂದ ಸುಮಾರು 40 ಮೃತದೇಹಗಳನ್ನು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ ಎಂದು ಉತ್ತರಪ್ರದೇಶದ ಪೊಲೀಸ್ ಮೂಲಗಳು ತಿಳಿಸಿವೆ.
ಮೌನಿ ಅಮಾವಾಸ್ಯೆ ದಿನವಾದ ಇಂದು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಜನರು ಪ್ರಯಾಗರಾಜ್‌ಗೆ ಆಗಮಿಸಿದ್ದರು. ಮುಂಜಾನೆ 3 ಗಂಟೆಯ ಸುಮಾರಿಗೆ ಪವಿತ್ರ ಸ್ನಾನ ಮಾಡಲು ಯಾತ್ರಾರ್ಥಿಗಳು ೇಕಾಏಕಿ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಘಟನೆ ನಡೆದು 12 ಗಂಟೆ ಕಳೆದರೂ ಸಾವು ನೋವುಗಳ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿಲ್ಲ. ಕರ್ನಾಟಕದ ನಾಲ್ವರು ಸೇರಿ ಇಲ್ಲಿಯವರೆಗೆ 10ಕ್ಕೂ ಅಧಿಕ ಮಂದಿ ಮೃತಪಟ್ಟಿರುವುದಾಗಿ ಮೂಲಗಳು ತಿಳಿಸಿವೆ. ಸಾವು ನೋವು ಕುರಿತು ಖಚಿತ ಮಾಹಿತಿ ಲಭ್ಯವಾಗಿಲ್ಲ. ಸರ್ಕಾರ ಅಥವಾ ಪೊಲೀಸರೂ ಮಾಹಿತಿ ಹಂಚಿಕೊಂಡಿಲ್ಲ.

