ರಾಜೀನಾಮೆ ನೀಡದಿದ್ದರೆ ಲಕ್ಷಾಂತರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದೆಹಲಿಗೆ ಬರಲಿದ್ದಾರೆ : ಸಿಜೆಪಿ ಎಚ್ಚರಿಕೆ

ನವದೆಹಲಿ : ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ವಿಫಲವಾದರೆ, “ಇನ್ನೂ ಲಕ್ಷಾಂತರ ಜನರು” ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು CJP ನಾಯಕ ಅಶುತೋಷ್ ರಂಕಾ ಎಚ್ಚರಿಕೆ ನೀಡಿದ್ದಾರೆ.

ಜಂತರ್ ಮಂತರ್‌ನಲ್ಲಿ ಬುಧವಾರ  ಸಾವಿರಾರು ಪ್ರತಿಭಟನಾಕಾರರು ಜಮಾಯಿಸಿದ್ದಾರೆ  ಎಂದು ‘ಕಾಕ್ರೋಚ್ ಜನತಾ ಪಾರ್ಟಿ’ (CJP)  ತಿಳಿಸಿದೆ.
 ಸಂಸತ್ ಭವನ, ರಫಿ ಮಾರ್ಗ ಮತ್ತು ದೆಹಲಿಯ ಇತರ ಭಾಗಗಳಲ್ಲಿ ಬಿಗಿ ಭದ್ರತೆ ಮತ್ತು ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಸೋಮವಾರ ನಡೆದ ಪ್ರತಿಭಟನಾ ಮೆರವಣಿಗೆಯ ವೇಳೆ ನಡೆದ ಹಿಂಸಾಚಾರ ಮತ್ತು ದಾಂಧಲೆಗೆ ಸಂಬಂಧಿಸಿದಂತೆ ಪೊಲೀಸರು ಆರು ಎಫ್‌ಐಆರ್‌ಗಳನ್ನು   ದಾಖಲಿಸಿದ್ದು, ಇದರ ಹಿಂದೆ ದೊಡ್ಡ ಮಟ್ಟದ ಕ್ರಿಮಿನಲ್ ಪಿತೂರಿ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಏತನ್ಮಧ್ಯೆ, ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಹಾಗೂ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಇತರ ವಿರೋಧ ಪಕ್ಷದ ನಾಯಕರ ಬಂಧನದ ವಿರುದ್ಧ ಕಾಂಗ್ರೆಸ್ ಘಟಕಗಳು ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಸಿದವು.  

ಪ್ರತ್ಯೇಕವಾಗಿ, ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಹೈಕೋರ್ಟ್‌ನ ಆದೇಶದ ಮೇರೆಗೆ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಕೇಂದ್ರ ಸಚಿವರಾದ ಜಿತೇಂದ್ರ ಸಿಂಗ್ ಮತ್ತು ಜೆ.ಪಿ. ನಡ್ಡಾ ಅವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯದ ಕುರಿತು ವಿಚಾರಿಸಿದರು.

More articles

Latest article

Most read