ಹಿರಿಯ ಲೇಖಕ, ಚಿಂತಕ ಹಾಗೂ ಖ್ಯಾತ ವಾಗ್ಮಿ ಲಕ್ಮೀಶ ತೋಳ್ಪಾಡಿ ಅವರಿಗೆ ಈ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಳಿಯ ಶಾಂತಿಗೋಡು ಗ್ರಾಮದವರಾದ ಲಕ್ಮೀಶ ತೋಳ್ಪಾಡಿ ಅವರ ʼಮಹಾಭಾರತ ಅನುಸಂಧಾನ ಭಾರತಯಾತ್ರೆʼ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿಯು ತಿಳಿಸಿದೆ.