ವಯನಾಡಿನಲ್ಲಿ ಭಾರೀ ಮಳೆ : ಸುರಂಗ ಕಾಮಗಾರಿ ಸ್ಥಳದಲ್ಲಿ ಭೂಕುಸಿತ

ವಯನಾಡು :  ವಯನಾಡ್ ಜಿಲ್ಲೆಯ ಕಲ್ಲಾಡಿಯಲ್ಲಿ ಭಾರೀ ಮಳೆಯಿಂದ  ಭೂಕುಸಿತ ಸಂ ಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅವಘಡದಲ್ಲಿ ಏಳು ಮಂದಿ ಗಾಯಗೊಂಡಿದ್ದರೆ, ಇತರ ಏಳು ಜನರು ನಾಪತ್ತೆಯಾಗಿದ್ದಾರೆ ಎಂದು ಕೇ ರಳಂ ಪೊಲೀಸರು ತಿಳಿಸಿದ್ದಾರೆ.

ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ರಸ್ತೆ ಯೋಜನೆಯ ಕಾಮಗಾರಿ ನಡೆಯುತ್ತಿದ್ದ ಕಲ್ಲಾಡಿಯ ಮೀನಾಕ್ಷಿ ಸೇತುವೆಯ ಬಳಿ ಭೂಕುಸಿತ ಸಂಭವಿಸಿದೆ.

ಭೂಕುಸಿತ ಪ್ರದೇಶದಲ್ಲಿ ಸಂಗ್ರಹವಾಗಿದ್ದ ಭಾರಿ ಪ್ರಮಾಣದ ಮಣ್ಣನ್ನು ತೆರವುಗೊಳಿಸುವಂತೆ ಲೋಕೋ ಪಯೋಗಿ ಸಚಿವ ಪಿ. ಕೆ. ಬಶೀರ್ ಮತ್ತು ಜಿಲ್ಲಾಧಿಕಾರಿಗಳು ಗುತ್ತಿಗೆದಾರರಿಗೆ ಮುಂಚಿತವಾಗಿಯೇ ಸೂಚಿಸಿದ್ದರು. ಆದಾಗ್ಯೂ, ಗುತ್ತಿಗೆದಾರರು ನಿರ್ದೇಶನಗಳನ್ನು ಪಾಲಿಸಿಲ್ಲ ಎಂದು ತಿಳಿದು ಬಂದಿದೆ.

ಸೂಕ್ತ ಹವಾಮಾನ ಮುನ್ಸೂಚನೆ ಅಥವಾ ಎಚ್ಚರಿಕೆ ನೀಡದಿರುವುದು ಭೂಕುಸಿತಕ್ಕೆ ಕಾರಣವಲ್ಲ. ಬದಲಿಗೆ ಅಧಿಕಾರಿಗಳು ಸೂಚಿಸಿದಂತೆ ಸಮಯಕ್ಕೆ ಸರಿಯಾಗಿ ಮಣ್ಣನ್ನು ತೆರವುಗೊಳಿಸದಿರುವುದೇ ಇದಕ್ಕೆ ಕಾರಣವಾಗಿದೆ.

ರಕ್ಷಣಾ ಪಡೆಗಳು, ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಈಗಾಗಲೇ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅಗತ್ಯ ಬಿದ್ದರೆ ತ್ರಿಶೂರ್‌ನಲ್ಲಿರುವ ರಕ್ಷಣಾ ಪಡೆಯನ್ನು ನಿಯೋಜಿಸಲಾಗುವುದು ಎಂದು ಸಿಎಂ ವಿ.ಡಿ.ಸತೀಶನ್‌ ಹೇಳಿದರು. ಮಳೆ ತೀವ್ರತೆ ಕಡಿಮೆಯಾಗಿದ್ದು ಸಿಬ್ಬಂದಿ ರಕ್ಷಣೆ ಕಾರ್ಯಾಚರಣೆ ವೇಗಗೊಳಿಸಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

ದುರಂತಕ್ಕೆ ರಾಹುಲ್‌ ಗಾಂಧಿ  ಕಳವಳ
ಕೇರಳಂನ ವಯನಾಡಿನ ಕಲ್ಲಾಡಿ ಎಂಬಲ್ಲಿ ಸಂಭವಿಸಿರುವ ಭೂ ಕುಸಿತದ ಘಟನೆ ಅತ್ಯಂತ ಕೆಟ್ಟ ಸಂಗತಿ ಎಂದು ಲೋಕ ಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ  ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಭೂ ಕುಸಿತದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ದುರಂತದಲ್ಲಿ ಪ್ರಾಣ ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಮಣ್ಣಿನಡಿ ಸಿಲುಕಿರುವವರನ್ನು ರಕ್ಷಿಸಲು ಸರ್ಕಾ ರ ಎಲ್ಲಾ ರೀ ತಿಯ ಪ್ರಯತ್ನಗಳನ್ನು ಮಾಡಬೇಕು. ಕಾಂಗ್ರೆಸ್ ಮತ್ತು ಯುಡಿಎಫ್ ಕಾರ್ಯಕರ್ತರು ತಕ್ಷಣವೇ ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಮನವಿ ಮಾಡಿದ್ದಾರೆ.

ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸಹ ಪ್ರತಿಕ್ರಿಯಿಸಿದ್ದು, ಘಟನೆಗೆ ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಸಿಲುಕಿರುವವರ ರಕ್ಷಣೆಗೆ ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ.ಎನ್‌ಡಿಆರ್‌ಎಫ್‌,  ಮತ್ತು ನಾಗರಿಕ ರಕ್ಷಣಾ ಸ್ವಯಂ ಸೇ ವಕರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.  ಜಿಲ್ಲಾಡಳಿತದೊಂದಿಗೆ ನಿರಂತರ ಸಮನ್ವಯ ಸಾಧಿಸಲಾಗುತ್ತಿದೆ. ರಕ್ಷಣಾ ಕಾರ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ಸಾರ್ವಜನಿಕರು ಆಡಳಿತ ಮಂಡಳಿಯ ಮಾರ್ಗ ಸೂಚಿಗಳನ್ನು ಪಾಲಿಸಬೇಕು ಎಂದು ಅವರು ಕೋರಿದ್ದಾರೆ.

More articles

Latest article

Most read