ಮಂಗಳೂರು ನಗರದ ಬಲ್ಮಠ ಬಳಿಯ ಮಂಗಳೂರು ನರ್ಸಿಂಗ್ ಹೋಮ್ ಮುಂಭಾಗದ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ಭೂ ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ಬುಧವಾರ ವರದಿಯಾಗಿದೆ.
ಸ್ಥಳದಲ್ಲಿ ಅಗ್ನಿಶಾಮಕ ದಳ, ಎಸ್ ಡಿ ಆರ್ ಎಫ್ ಕಾರ್ಯಾಚರಣೆ ನಡೆಸುತ್ತಿದ್ದು, ಕಾರ್ಮಿಕರ ಪ್ರಾಣ ಉಳಿಸಲು ಕಾರ್ಯಚರಣೆ ನಡೆಸುತ್ತಿದ್ದಾರೆ. ಮಣ್ಣಿನಡಿ ಸಿಲುಕಿರುವ ಸಂತ್ರಸ್ತರನ್ನು ಬಿಹಾರ ಮೂಲದ ರಾಜ್ ಕುಮಾರ್ ಹಾಗೂ ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ ಎಂದು ಗುರುತಿಸಲಾಗಿದೆ.
ಈಗಾಗಲೇ ಮಣ್ಣಿನಡಿಯಲ್ಲಿರುವ ಕಾರ್ಮಿಕರ ಜೊತೆ ರಕ್ಷಣಾ ತಂಡದ ಸಿಬ್ಬಂದಿಗಳು ಸಂಪರ್ಕ ಸಾಧಿಸಿದ್ದು, ಅವಶೇಷದಡಿ ಸಿಲುಕಿದ್ದ ಓರ್ವ ಕೂಲಿ ಕಾರ್ಮಿಕನನ್ನು ರಕ್ಷಣೆ ಮಾಡಲಾಗಿದೆ.
ಕಾರ್ಮಿಕರ ಮೇಲೆ ಮಣ್ಣು ಬಿದ್ದಿಲ್ಲದ ಕಾರಣ ಅವರಿಗೆ ಬಿಲ್ಡಿಂಗ್ ಕೊರೆದು ಆಕ್ಸಿಜನ್ ವ್ಯವಸ್ಥೆ ಮಾಡಲಾಗುತ್ತಿದೆ. ಅದೇ ರೀತಿ ನೀರು, ಆಹಾರ ಕೊಡುವ ವ್ಯವಸ್ಥೆ ಮಾಡಲಾಗುತ್ತಿದೆ.
ಸ್ಥಳದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ, ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಎಡಿಸಿ ಸಂತೋಷ್ ಕುಮಾರ್, ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಡಿಸಿಪಿ ಸಿದ್ದಾರ್ಥ್ ಗೋಯಲ್ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.