ಎಸ್ ಎಸ್ ಎಲ್ ಸಿ: ಹೆಚ್ಚು ಅಂಕ ಪಡೆಯುವ ತಾಲೂಕು, ಜಿಲ್ಲಾ ಮಟ್ಟದ ತಲಾ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಹತ್ತಿರವಾಗುತ್ತಿವೆ. ಈ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸುವ  ವಿದ್ಯಾರ್ಥಿಗಳಿಗೆ ಬಂಪರ್ ಬಹುಮಾನ ನೀಡಲು ಉದ್ದೇಶಿಸಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಸರ್ಕಾರಿ ಶಾಲೆಯ ಮೂವರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್ ನೀಡಲು ಸರ್ಕಾರ ಉದ್ದೇಶಿಸಿದೆ. ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಈ ಕ್ರಮ ಅನುಸರಿಸಲು ಮುಂದಾಗಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಪ್ರತಿ ತಾಲೂಕಿನ ಮೂವರು ಹಾಗೂ ಜಿಲ್ಲಾ ಮಟ್ಟದ  ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ನೀಡಲಾಗುತ್ತದೆ. ಕಳೆದ ನವಂಬರ್ ನಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕು ಹಾಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡುವುದಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದರು. ಇದೀಗ ಈ ಸಂಬಂಧ ಅಧಿಕೃತ ಆದೇಶ ಹೊರ ಬಿದ್ದಿದೆ

More articles

Latest article

Most read