ಬೆಂಗಳೂರು: ಪೆಟ್ರೋಲ್, ಡೀಸೆಲ್ ಏರಿಕೆ ವಿಷಯ ಇಟ್ಟುಕೊಂಡು ಪ್ರತಿಭಟನೆಯ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ಕೊಟ್ಟರೆ, ಕಾನೂನು ಸುವ್ಯಸ್ಥೆಗೆ ಭಂಗ ತಂದರೆ ಲಾಠಿ ಚಾರ್ಜ್ ಮಾಡಬೇಕಾಗುತ್ತದೆ ಎಂದು ಬಿಜೆಪಿ ನಾಯಕರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಬಿಜೆಪಿಗೆ ಪ್ರತಿಭಟನೆ ಮಾಡಬೇಡಿ ಎಂದು ಹೇಳುವುದಿಲ್ಲ. ಅದು ಅವರ ಹಕ್ಕು. ಸಾರ್ವಜನಿಕರಿಗೆ ತೊಂದರೆ ಕೊಟ್ರೆ ಲಾಠಿ ಚಾರ್ಜ್ ಮಾಡುತ್ತೇವೆ ಎಂದು ಎಚ್ಚರಿಸಿದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣ ಕೇಸ್ ದುರ್ಬಲಗೊಳಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಪ್ರಭಾವ, ಒತ್ತಡಕ್ಕೂ ಮಣಿಯದೆ ತನಿಖೆ ನಡೆಯುತ್ತಿದೆ. ಎಸ್ ಪಿಪಿ ಬದಲಾವಣೆಯಾದ್ರೆ ಅದಕ್ಕೆ ಕಾರಣ ಇರುತ್ತೆ ಎಂದು ಅವರು ಹೇಳಿದರು.
ಏಳು ವರ್ಷಗಳ ಹಿಂದೆ ನಾಪತ್ತೆಯಾದ ದರ್ಶನ್ ಮ್ಯಾನೇಜರ್ ಮಲ್ಲಿಕಾರ್ಜುನ್ ಬಗ್ಗೆ ಮಾಹಿತಿ ಇಲ್ಲ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತದೆ ಎಂದು ಅವರು ಹೇಳಿದರು.