ಹಾಸನ : ಮಾರಕಾಸ್ತ್ರಗಳಿಂದ ವಕೀಲರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ, ಈಶ್ವರಹಳ್ಳಿ ಕೂಡಿಗೆ ಎಂಬಲ್ಲಿ ನಡೆದಿದೆ. 40 ವರ್ಷದ ದುಷ್ಯಂತ್ ಹಲ್ಲೆಗೊಳಗಾದ ವಕೀಲರು. ಇವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ದುಷ್ಯಂತ್ ಮೂಲತಃ ರಂಗೇನಹಳ್ಳಿ ಗ್ರಾಮದ ನಿವಾಸಿ. ಇವರು ವಕೀಲಿ ವೃತ್ತಿ ಜೊತೆಗೆ ಫೈನಾನ್ಸ್ ವ್ಯವಹಾರ ಮಾಡುತ್ತಿದ್ದರು. ನಿನ್ನೆ ರಾತ್ರಿ KA-46-L-4087 ನಂಬರ್ನ ಬೈಕ್ ನಲ್ಲಿ ರಂಗೇನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ದುಷ್ಯಂತ್ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ದುಷ್ಕರ್ಮಿಗಳು ಮನಬಂದಂತೆ ಕೊಚ್ಚಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ದುಷ್ಯಂತ್ಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪ್ರಕರಕಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.