Sunday, July 14, 2024

ನಾನು ಕಾಂಗ್ರೆಸ್ ಬಿಡುವುದಿಲ್ಲ : ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಲಕ್ಷ್ಮಣ ಸವದಿ

Most read

ರಾಜ್ಯದಲ್ಲಿ ಲೋಕಸಭಾ ಚುನಾವಣೆಗೂ ಮುನ್ನವೇ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳಿ ಬಂದಾಗೆ ಶಾಸಕ ಲಕ್ಷ್ಮಣ ಸವದಿ ಕೂಡ ಬಿಜೆಪಿ ಸೇರುತ್ತಾರೆ ಎಂಬ ವದಂತಿ ಹರಡಿದೆ. ಇದರ ಬೆನ್ನಲ್ಲಿಯೇ ಲಕ್ಷ್ಮಣ ಸವದಿ ಕೇಂದ್ರ ಸರ್ಕಾರ ವಿರುದ್ಧ ಕಿಡಿಕಾರಿ, ಬಿಜೆಪಿಗೆ ಸೇರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆ ಅಥಣಿ ಯಕ್ಕಂಚ್ಚಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಹೊಗಲ್ಲ. ನಾನು ಬೀದರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಕೇಳಿ ಬರುತ್ತಿವೆ. ನಾನು ಟಿವಿಯಲ್ಲಿ ನೋಡಿ ಅಚ್ಚರಿ ಮೂಡಿಸಿದೆ. ಎತ್ತಣ ಮಾಮರ ಎತ್ತಣ ಕೋಗಿಲೆ ಎತ್ತಣಿನಿಂದೆತ್ತ ಸಂಬಂಧವಯ್ಯಾ?. ಆ ಸುದ್ದಿ ಎಲ್ಲವೂ ಸುಳ್ಳು. ನಾನು ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆ ಸ್ವರ್ಧೆ ಮಾಡುವುದಿಲ್ಲ. ನಾನು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಲ್ಲ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಇದನ್ನು ಖಂಡಿಸುತ್ತೇವೆ. ನಮಗೆ ಬರಬೇಕಾದ ಅನುದಾನದ ಪಾಲು ಕೊಡುತ್ತಿಲ್ಲ. ಹೀಗಾಗಿ ನಾವು ಸಿಎಂ ನೇತೃತ್ವದಲ್ಲಿ ದೆಹಲಿಗೆ ಹೋಗಿ ಸಾಂಕೇತಿಕ ಪ್ರತಿಭಟನೆ ಮಾಡುತ್ತೇವೆ. 136 ಶಾಸಕರು ಜೊತೆಯಾಗಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.

ಅಥಣಿ ಕ್ಷೇತ್ರದ ಜನರು ಶಾಸಕರಾಗಿ ಇರುವಂತೆ ಆದೇಶವನ್ನು ಮಾಡಿದ್ದಾರೆ. ಆದ್ದರಿಂದ ನಾನು ಶಾಸಕನಾಗಿ ಇರುತ್ತೇನೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದಲೂ ನಾನು ಸ್ವರ್ಧೆ ಮಾಡುವುದಿಲ್ಲ. ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ವಿವಿಧ ಇಲಾಖೆಗಳಿಂದ ಅಥಣಿ ಮತಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರಲಾಗುತ್ತಿದೆ. ಕಾಮಗಾರಿಯನ್ನು ಪ್ರಾರಂಭ ಮಾಡಲಾಗಿದೆ ಎಂದು ಹೇಳಿದ್ದಾರೆ.

More articles

Latest article