ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಶಾಲಾ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ತನ್ನ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನವೆಂಬರ್ 1 ನಮಗೆ ರೋಮಾಂಚನ ದಿನ. ಈ ವರ್ಷ 50ನೇ ವರ್ಷದ ರಾಜೋತ್ಸವ ಆಚರಿಸುತ್ತಿದ್ದೇವೆ. ಸ್ವಾತಂತ್ರ‍್ಯ ದಿನದ ರೀತಿ ಸಂಭ್ರಮ ಮಾಡಬೇಕು ಎಂದು ಹೇಳಿದ್ದಾರೆ.
ಕನ್ನಡ ಬಾವುಟ ಕಡ್ಡಾಯ ಮಾಡಿದ್ದನ್ನು ಕನ್ನಡ ಸಂಘಟನೆಗಳು ದುರುಪಯೋಗ ಮಾಡಿಕೊಳ್ಳಬಾರದು. ಕಾರ್ಖಾನೆ, ಕಂಪನಿಗಳಿಗೆ ಒತ್ತಡ, ಕಿರುಕುಳ ನೀಡಬಾರದು. ಕನ್ನಡ ಸಂಘಟನೆಗಳು ಯಾರಿಗೂ ಹೆದರಿಸಬಾರದು. ಹಾಗೆ ಏನಾದರೂ ಒತ್ತಡ ಹೇರಿದರೆ ಅಂತಹ ಸಂಘಟನೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು