ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ್ದಕ್ಕೆ ಜೀವಾವಧಿ ಶಿಕ್ಷೆ; ಪ್ರಜ್ವಲ್‌ ಮುಂದಿರುವ ಆಯ್ಕೆಗಳೇನು?

ಬೆಂಗಳೂರು: ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಜೆಡಿಎಸ್‌ ಮುಖಂಡ ಪ್ರಜ್ವಲ್‌ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ (ಸೆಷನ್ಸ್‌) ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಸಿದೆ.

ಹಾಗಾದರೆ ಪ್ರಜ್ವಲ್‌ ಮುಂದಿನ ನಡೆ ಏನಾಗಿರಬಹುದು ಮತ್ತು ಕಾನೂನಿಲ್ಲಿ ಏನೆಲ್ಲಾ ಅವಕಾಶಗಳಿವೆ ನೋಡೋಣ.

ಈ ತೀರ್ಪು ಪ್ರಶ್ನಿಸಿ ಅವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆಗಳಿವೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ​​ ನೀಡಿರುವ ಶಿಕ್ಷೆಗೆ ತಡೆ ಅಥವಾ ರದ್ದು ಕೋರಿ ಹೈಕೋರ್ಟ್​​ ಗೆ ಅರ್ಜಿ ಸಲ್ಲಿಸಬಹುದು. ಹಾಗೇ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆಯೂ ನ್ಯಾಯಲಯವನ್ನು ಪ್ರಾರ್ಥಿಸಬಹುದು.

ಹೀಗಾಗಿ ಪ್ರಜ್ವಲ್ ರೇವಣ್ಣ ಪರ ವಕೀಲರು ಯಾವ ಹೆಜ್ಜೆ ಇಡಲಿದ್ದಾರೆ ಎಂದು ದುನೋಡಬೇಕಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ​​ ನೀಡಿರುವ ತೀರ್ಪಿಗೆ ಹೈಕೋರ್ಟ್‌ ತಡೆ ನೀಡಬಹುದು ಇಲ್ಲವೇ ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡಬಹುದು. ಒಂದು ವೇಳೆ ಹೈಕೋರ್ಟ್, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದರೆ ಪ್ರಜ್ವಲ್ ರೇವಣ್ಣ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದೆ. ಸುಪ್ರೀಂಕೋರ್ಟ್​ನಲ್ಲೂ ಕೆಳ ನ್ಯಾಯಾಲಯದ ಆದೇಶದ ಎತ್ತಿಹಿಡಿದರೆ ಪ್ರಜ್ವಲ್ ರೇವಣ್ಣಗೆ ಜೈಲು ಖಾಯಂ ಆಗುತ್ತದೆ.

More articles

Latest article

Most read