ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ರಾಜ್ಯದಲ್ಲಿ ದಾಖಲೆ ಪ್ರಮಾಣದ ಮದ್ಯ ಮಾರಾಟವಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ಮೂರು ದಿನಗಳಲ್ಲಿ ರೂ. 745.84 ಕೋಟಿ ಆದಾಯ ಸೇರ್ಪಡೆಯಾಗಿದೆ.
ಕಳೆದ ಮೂರು ವರ್ಷಗಳಿಗೆ ಹೋಲಿಕೆ ಮಾಡಿದರೆ 2025ರ ಕೊನೆಯಲ್ಲಿ ಅತಿ ಹೆಚ್ಚು ಮದ್ಯ ಮಾರಾಟವಾಗಿದೆ. ಅದರಲ್ಲೂ ಇಂಡಿಯನ್ ಮೇಡ್ ಲಿಕ್ಕರ್ (IML) ಮತ್ತು ಬಿಯರ್ ಮಾರಾಟದಲ್ಲಿ ದಾಖಲೆ ಸೃಷ್ಟಿಯಾಗಿದೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ವರ್ಷದ ಕೊನೆಯ ದಿನದಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 1 ಗಂಟೆಯವರೆಗೆ ಮದ್ಯ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿತ್ತು.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚುವರಿಯಾಗಿ 166.74 ಕೋಟಿ ರೂ ಆದಾಯ ಹರಿದುಬಂದಿದೆ. 2025ರ ಡಿಸೆಂಬರ್. 29, 30, 31ರಂದು 9.84 ಲಕ್ಷ ಬಾಕ್ಸ್ ಇಂಡಿಯನ್ ಮೇಡ್ ಲಿಕ್ಕರ್ ಮತ್ತು 6.64 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ. 2024ರ ಡಿ.29, 30, 31ರಂದು 8.25 ಲಕ್ಷ ಬಾಕ್ಸ್ IML ಮತ್ತು 5.03 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದ್ದು, 420.77 ಕೋಟಿ ರೂ ಆದಾಯ ಬಂದಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ 2025ರಲ್ಲಿ 1.59 ಲಕ್ಷ ಬಾಕ್ಸ್ ಐಎಂಎಲ್ ಮತ್ತು 1.61 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ.

