ಒಂದು ರೂ.ಗೆ ಲೀಟರ್ ಹಾಲು : ಫ್ಲಿಪ್‌ಕಾರ್ಟ್‌ ವಿರುದ್ಧ ದೂರು

ಬಮುಲ್ ಒಕ್ಕೂಟಕ್ಕೆ 40- 50 ಸಾವಿರ ಲೀ ಹಾಲು ಮಾರಾಟ ಕುಸಿತ : ಡಿ.ಕೆ.ಸುರೇಶ್

ಬೆಂಗಳೂರು : ಒಂದು ರೂಪಾಯಿಗೆ ಒಂದು ಲೀಟರ್ ಹಾಲು ಮಾರಲು ಮುಂದಾಗಿರುವ ಫ್ಲಿಪ್ ಕಾರ್ಟ್ ಸಂಸ್ಥೆ ವಿರುದ್ಧ ದೂರು ನೀಡಲಾಗುದು ಎಂದು  ಬಮುಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ತಿಳಿಸಿದರು.

ಕಾಂಪಿಟೇಷನ್ ಕಮಿಷನ್ ಆಫ್ ಇಂಡಿಯಾ, ನವದೆಹಲಿ ಇವರಿಗೆ ಸೆಕ್ಷನ್ 19/1 ಎ ಅಡಿ ಕ್ರಮ ತೆಗೆದುಕೊಳ್ಳಬೇಕು ಎಂದು ದೂರು ನೀಡಲಾಗುತ್ತಿದೆ. ಜೊತೆಗೆ ಈ ವಿಚಾರವನ್ನು ಪ್ರಧಾನಿ ಮೋದಿಯವರಿಗೆ ಇ ಮೇಲ್ ಮುಖಾಂತರ ಕಳಿಸುತ್ತಿದ್ದೇನೆ‌” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್  ತಿಳಿಸಿದರು.

ಹಣ ಮಾಡುವ ಭರದಲ್ಲಿ ಫ್ಲಿಪ್ ಕಾರ್ಟ್ ಎನ್ನುವ ಸಂಸ್ಥೆ ಒಂದು ರೂಪಾಯಿಗೆ ಒಂದು ಲೀಟರ್ ಹಾಲು ನೀಡಲು ಮುಂದಾಗಿದೆ. ರೈತ ಸಮುದಾಯವನ್ನ ಧ್ವಂಸ ಮಾಡುವಂತಹ ಕೃತ್ಯಕ್ಕೆ ಕೈ ಹಾಕಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಇಡೀ ದೇಶದಾದ್ಯಂತ ದಂಗೆ ಮಾಡಬೇಕಾದ ಪರಿಸ್ಥಿತಿ ಉಂಟಾಗಲಿದೆ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

ಮಾರುಕಟ್ಟೆಯನ್ನು ಆವರಿಸಿಕೊಳ್ಳಬೇಕು ಎಂದು ಮಾಡುತ್ತಿರುವ ಸ್ಪರ್ಧೆಯಿಂದ ರೈತರಿಗೆ ಹೊಡೆತ ಬೀಳುತ್ತದೆ. ಇದಕ್ಕಾಗಿಯೇ ಸುಮಾರು 2 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ. ಸಾರ್ವಜನಿಕರ ಶೇರಿನ ಹಣ ಬಳಸಿ ಹೀಗೆ ದುರ್ಬಳಕೆ ಮಾಡಿಕೊಳ್ಳುತ್ತಾ ಇರುವುದು ಸೂಕ್ತವಲ್ಲ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದು ಮಾಹಿತಿ ನೀಡಲಾಗುವುದು ಎಂದು ಹೇಳಿದರು.

ಸ್ವಾತಂತ್ರ್ಯ ಪೂರ್ವದಿಂದಲೂ ಇರುವ ಹಾಲು ಒಕ್ಕೂಟ ಸಂಸ್ಥೆಗಳನ್ನು ನಾಶ ಮಾಡುವ ಪ್ರಕ್ರಿಯೆ ಇದಾಗಿದೆ. ಎಂಎನ್ ಸಿಗಳು ರೈತರ ಹಿತವನ್ನ ಹಾಳು ಮಾಡುವ ಕೆಲಸ ಮಾಡುತ್ತಿವೆ. ಕಡಿಮೆ ದರಕ್ಕೆ ಎಷ್ಟು ದಿನ ಹಾಲನ್ನು ನೀಡುತ್ತಾರೆ ಎಂದು ಜಾಹಿರಾತಿನಲ್ಲಿ ತಿಳಿಸಬೇಕು. ರೈತ ಸಂಕುಲವನ್ನ ಹಾಳು ಮಾಡುತ್ತಿರುವ ಈ ಕೆಲಸದಿಂದ ಫ್ಲಿಪ್ ಕಾರ್ಟ್ ಸಂಸ್ಥೆ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.

14.5 ಲಕ್ಷ ಲೀ ಹಾಲು ಮಾರಾಟ : ಈಗಾಗಲೇ 14.5 ಲಕ್ಷ ಲೀಟರ್ ಹಾಲು ಮಾರಾಟ ಆಗಿದೆ. ಈಗಾಗಲೇ ಎಲ್ಲಾ ಕಡೆ ಜಾಹಿರಾತು ನೀಡಿದೆ. ಸಾರ್ವಜನಿಕರ ಹಣವನ್ನು ಹೂಡಿಕೆ ಮಾಡಿ ಗ್ರಾಹಕರನ್ನ ಆಕರ್ಷಣೆ ಮಾಡಲಾಗುತ್ತಿದೆ. ಆ ಕಂಪನಿಯವರು ಎಷ್ಟು ದಿನ ಈ ರೀತಿ ಹಾಲು ಕೊಡುತ್ತಾರೆ ಎಂಬುದನ್ನು ಬಹಿರಂಗಗೊಳಿಸಬೇಕು ಎಂದರು.

ನಂದಿನಿ ಹಾಲಿನ ಮಾರಾಟ ಪ್ರಮಾಣ ಕಡಿಮೆಯಾಗಿದೆಯೇ ಎಂದು ಕೇಳಿದಾಗ, ಮಾರುಕಟ್ಟೆಯಲ್ಲಿ ನಂದಿನಿ ಹಾಲು ಮಾತ್ರ ಇಲ್ಲ‌. ಅನೇಕ ಕಂಪೆನಿಗಳಿವೆ. ಬಮುಲ್ ಒಕ್ಕೂಟಕ್ಕೆ 40- 50 ಸಾವಿರ ಲೀ ಹಾಲು ಮಾರಾಟ ಕಡಿಮೆಯಾಗಿದೆ. ಎಷ್ಟು ದಿನದಿಂದ ಇದು ಕಡಿಮೆಯಾಗಿದೆ ಎಂದು ತಿಳಿದುಕೊಳ್ಳಬೇಕು‌ ಎಂದರು.

More articles

Latest article

Most read