Saturday, May 18, 2024

ಲೋಕಸಭೆಗೆ ಬಿಜೆಪಿಯಿಂದ ಸುಧಾಕರ್‌ಗೆ ಟಿಕೆಟ್ ಕೊಟ್ಟರೆ, ಕಾಂಗ್ರೆಸ್ ನಿಂದ ನಾನು ಸ್ಪರ್ಧಿಸಲು ಸಿದ್ಧ : ಶಾಸಕ ಪ್ರದೀಪ್ ಈಶ್ವರ್

Most read

2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸುಧಾಕರ್ ಅವರಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ನಿಂದ ಸ್ಪರ್ಧಿಸಲು ನಾನು ರೆಡಿ ಇದ್ದೇನೆ. ಹೈಕಮಾಂಡ್ ಸೂಚಿಸಿದರೆ ಈಗಿನಿಂದಲೇ ಸಿದ್ಧತೆ ನಡೆಸುವೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.

ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಿಂದ ಕೆ ಸುಧಾಕರ್‌ಗೆ ಟಿಕೆಟ್ ಕೊಟ್ಟರೆ, ಕಾಂಗ್ರೆಸ್ ನಿಂದ ಸ್ಪರ್ಧಿಸಲು ನಾನು ರೆಡಿ ಇದ್ದೇನೆ, ನನಗೆ ಟಿಕೆಟ್ ಕೊಡಲಿ. ಕಳೆದ ವಿಧಾನಸಭಾ ಚುನಾವಣೆಯ ಗೆಲುವಿನಂತೆ ಲೋಕಸಭೆ ಚುನಾವಣೆಯಲ್ಲೂ ಗೆದ್ದು ಬರುತ್ತೇನೆ ಎಂದು ಹೇಳುವ ಮೂಲಕ ಸುಧಾಕರ್ ಗೆ ಕಟ್ಟರ್ ಕೊಟ್ಟಿದ್ದಾರೆ.

ಆದರೆ ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ವೀರಪ್ಪ ಮೊಯ್ಲಿ, ರಕ್ಷಾ ರಾಮಯ್ಯ, ಬಾಲಾಜಿ ಹಾಗೂ ಎಸ್ ರವಿ ಹೆಸರು ಕೇಳಿ ಬರುತ್ತಿದೆ..

ಸಂಸದ ಪ್ರತಾಪ್‌ ಸಿಂಹನಂತಹ ಅಯೋಗ್ಯ, ಮುಠ್ಠಾಳ ಮತ್ತೊಬ್ಬನಿಲ್ಲ. ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತಾಡಿದ್ರೆ ಹುಷಾರ್‌, ಪರಿಣಾಮ ನೆಟ್ಟಗಿರಲ್ಲ. ನಿಮ್ಮ ಬಾಯಿ ತೆವಲನ್ನು ಕಡಿಮೆ ಮಾಡಿ ಸುಮ್ಮನೆ ಇರಬೇಕು ಎಂದು ಪ್ರದೀಪ್ ಕಿಡಿಕಾರಿದ್ದಾರೆ.

More articles

Latest article