ರಾಜ್ಯಾದ್ಯಂತ ಲೋಕಾಯುಕ್ತ ದಾಳಿ, ಭ್ರಷ್ಟ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ, ದಾಖಲೆ ಪರಿಶೀಲನೆ

ಬೆಂಗಳೂರು: ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಆನೇಕಲ್‌ ಕಲಬುರ್ಗಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದ್ದಾರೆ.

ಬಿಬಿಎಂಪಿ ಎಇಇ ಪ್ರಕಾಶ್‌, ಆನೇಕಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೆ.ಜಿ.ಅಮರನಾಥ್, ಚಿಕ್ಕಮಗಳೂರು ನಗರಪಾಲಿಕೆ ಅಧಿಕಾರಿ ಲತಾ ಮಣಿ, ಗದಗ ಶಹರ ಠಾಣೆ ಸಿಪಿಐ ಡಿಬಿ ಪಾಟೀಲ್​, ಧಾರವಾಡ ಮಲಪ್ರಭಾ ಯೋಜನೆ ಇಂಜಿನಿಯರ್ ಅಶೋಕ್ ವಾಲ್ಸಂದ್, ಶಿವಮೊಗ್ಗದ ಆರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ನಿರ್ದೇಶಕ ಪ್ರದೀಪ್, ಸಣ್ಣೂರು ಗ್ರಾ.ಪಂ. ಪಿಡಿಒ ರಾಮಚಂದ್ರ, ಗದಗದ ಪಟ್ಟಣ ಪೊಲೀಸ್ ನಿರೀಕ್ಷಕ ಧ್ರುವರಾಜ್​, ಕಲಬುರಗಿ ಪಿಆರ್​ಇ ವಿಭಾಗದ ಇಇ ಮಲ್ಲಿಕಾರ್ಜುನ ಅಲಿಪುರ ಅವರ ನಿವಾಸಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ಇನ್ನೂ ಮುಂದುವರೆದಿದ್ದು, ದಾಖಲೆ, ಅಕ್ರಮ ಆಸ್ತಿಗಳ ಪತ್ರಗಳು, ಮನೆಯಲ್ಲಿರುವ ಚಿನ್ನ ಬೆಳ್ಳಿ ಆಭರಣ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.

ಲೋಕಾಯುಕ್ತ ದಾಳಿ ವೇಳೆ ಸಿಪಿಐ ಡಿ.ಬಿ. ಪಾಟೀಲ್ ಶೌಚಾಲಯದಲ್ಲಿ ಕುಳಿತುಕೊಂಡಿದ್ದರು. ಆದರೂ ಬಿಡದ ಲೋಕಾಯುಕ್ತ ಅಧಿಕಾರಿಗಳು, ಶೌಚಾಲಯದ ಬಳಿ ಕಿವಿ ಕೊಟ್ಟು ಯಾರ ಬಳಿಯಾದರೂ ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾರೆಯೇ ಎಂದು ಪರಿಶೀಳನೆ ನಡೆಸಿದ ಪ್ರಸಂಗವು ನಡೆದಿದೆ.

More articles

Latest article

Most read