ರಾಜ್ಯದ ಏಳು ಕಡೆ ಲೋಕಾಯುಕ್ತ ದಾಳಿ, ಭ್ರಷ್ಟ ಅಧಿಕಾರಿಗಳಿಗೆ ಶಾಕ್!

Most read

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿ ರಾಜ್ಯದ ಒಟ್ಟು ಏಳು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಅಕ್ರಮ ಆಸ್ತಿಪಾಸ್ತಿ ಶೋಧನೆ ನಡೆಸುತ್ತಿದ್ದಾರೆ.

ವಿವಿಧ ಇಲಾಖೆಗಳ ಏಳು ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ಎರಡು ಕಡೆ, ಬೆಳಗಾವಿಯಲ್ಲಿ ಎಡು ಕಡೆ, ಚಿತ್ರದುರ್ಗ, ರಾಯಚೂರು ಮತ್ತು ಬಾಗಕೋಟೆಯಲ್ಲಿ ತಲಾ ಒಂದು ಸ್ಥಳಗಳಲ್ಲಿ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಹೆಬ್ಬಾಳ ವ್ಯಾಪ್ತಿಯ ಎಂಜಿನಿಯರಿಂಗ್‌ ವಿಭಾಗದ ಎಇಇ ಮಾಧವ ರಾವ್‌, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಡೆಪ್ಯುಟಿ ಕಾರ್ಯದರ್ಶಿ ಟಿ.ಕೆ.ರಮೇಶ್‌ ಅವರ ನಿವಾಸಗಳ ಮೇಲೆ ದಾಳಿ ನಡೆದಿದೆ.

ಬೆಳಗಾವಿ ಉತ್ತರ ಸಬ್ ರಿಜಿಸ್ಟರ್ ಸಚಿನ್ ಮಂಡೇದ ಹಾಗೂ ರಾಯಬಾಗ ಪಶು ವೈದ್ಯಾಧಿಕಾರಿ ಸಂಜಯ ದುರ್ಗನ್ನವರ ಮೇಲೆ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಇಬ್ಬರು ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ ಮಾಡಿದ ಆರೋಪದಡಿ ದಾಳಿ ಮಾಡಲಾಗಿದೆ. ಲೋಕಾಯುಕ್ತ ಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ದಾಳಿ‌ ನಡೆದಿದೆ. ಅನಗೋಳ, ಹಾರೋಗೇರಿ,‌ ಬೆಲ್ಲದ ಬಾಗೇವಾಡಿ ಸೇರಿ ಮೂರು ಕಡೆಗಳಲ್ಲಿ ದಾಳಿ ನಡೆದಿದ್ದು, ಅನಗೋಳದಲ್ಲಿ ಲೋಕಾಯುಕ್ತ ಸಿಪಿಐ ನಿರಂಜನ ಪಾಟೀಲ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಬಾದಾಮಿ ತಾಲ್ಲೂಕಿನ ಹೊಲಗೇರಿ ಗ್ರಾಮ ಪಂಚಾಯಿತಿಯ ಪಿಡಿಒ ಎಸ್‌.ಪಿ. ಹಿರೇಮಠ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ನವನಗರದ ವಿದ್ಯಾಗಿರಿಯ 22ನೇ‌ ಅಡ್ಡರಸ್ತೆಯಲ್ಲಿ ಹಿರೇಮಠ ಅವರಭವ್ಯ ಮನೆ ಇದೆ.  ಹೂಲಗೇರಿ ಗ್ರಾಮ ಪಂಚಾಯಿತಿ ಕಚೇರಿಯಲ್ಲೂ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ. ಜೊತೆಗೆ ಗದಗ ಜಿಲ್ಲೆಯ ನರಗುಂದ ಮನೆ ಮೇಲೂ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಮೇಲೆ ಲೋಕಾಯುಕ್ತರು ಬೆಳ್ಳಂಬೆಳಿಗ್ಗೆ ಜಿಲ್ಲಾ ಪಂಚಾಯಿತಿಯ ಸಹಾಯಕ ಲೆಕ್ಕಾಧಿಕಾರಿ ನರಸಿಂಹರಾವ್ ಗುಜ್ಜಾರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ನಗರದ ದೇವರ ಕಾಲೊನಿಯಲ್ಲಿರುವ ಮನೆ ಮೇಲೆ ಲೋಕಾಯುಕ್ತ ಎಸ್ ಪಿ ಸಿದ್ದರಾಜು ಮತ್ತು ಡಿವೈಎಸ್ ಪಿ ಶೈಲಜಾ ನೇತೃತ್ವದ ತಂಡ ಬ್ಯಾಂಕ್ ದಾಖಲೆಗಳು, ಆಸ್ತಿ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ನರಸಿಂಹರಾವ್ ಗುಜ್ಜಾರ ಬೆಂಗಳೂರಿನಲ್ಲಿದ್ದಾರೆ ಎಂದು ತಿಳಿದು ಬಂದಿದೆ.

More articles

Latest article