ಬೆಂಗಳೂರು : ರಾಜ್ಯದ ವಿವಿದೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಬೆಂಗಳೂರು, ಮಂಡ್ಯ ಕಲಬುರಗಿ, ಹುಬ್ಬಳ್ಳಿ, ಚಿಕ್ಕಬಳ್ಳಾಪುರ, ಬೀದರ್ ಮತ್ತು ಚಿತ್ರದುರ್ಗ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಲೋಕಾಯುಕ್ತ ಎಸ್ಪಿ ಸ್ನೇಹಾ ಅವರ ನೇತೃತ್ವದಲ್ಲಿ ಬಸವನಗುಡಿಯ ಡಿಸ್ಟ್ರಿಕ್ಟ್ ರಿಜಿಸ್ಟ್ರಾರ್ ಶ್ರೀದೇವಿ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಭರ್ಜರಿ ದಾಳಿ ನಡೆಸಲಾಗಿದೆ. ಶ್ರೀದೇವಿ ಅವರ ಯಲಹಂಕದಲ್ಲಿರುವ ಮನೆ, ಬಸವನಗುಡಿ ಕಚೇರಿ ಹಾಗೂ ಈ ಹಿಂದೆ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ರಾಮನಗರದ ಕಚೇರಿಗಳ ಮೇಲೆಯೂ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಪ್ರಮುಖ ದಾಖಲೆಗಳು ಮತ್ತು ಆಸ್ತಿ-ಪಾಸ್ತಿಗಳ ಪರಿಶೀಲನೆ ಕಾಯ್ದೆ ನಡೆಸುತ್ತಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರಿನ ವಿನಾಯಕ ಬಡಾವಣೆಯಲ್ಲಿರುವ ಶಿವರಾಜ್ ಅವರ ಮನೆ ಹಾಗೂ ಅವಸರಹಳ್ಳಿಯಲ್ಲಿರುವ ಫಾರ್ಮ್ಹೌಸ್ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ವ್ಯಾಪಕ ಶೋಧ ಕೈಗೊಂಡಿದೆ. ತನಿಖೆ ವೇಳೆ, ಹಾಸ್ಟೆಲ್ ಮಕ್ಕಳಿಗೆ ತಲುಪಬೇಕಿದ್ದ ಸಾಮಗ್ರಿಗಳನ್ನು ಅಕ್ರಮವಾಗಿ ಕದ್ದು ಸಂಗ್ರಹಿಸಿಟ್ಟಿರುವುದು ಬಯಲಾಗಿದೆ. ಅಲ್ಲದೆ, ಪರಿಶೀಲನೆ ಸಂದರ್ಭದಲ್ಲಿ ಮನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಲೆಬಾಳುವ ಸ್ಕಾಚ್ ಹಾಗೂ ಮದ್ಯದ ಬಾಟಲಿಗಳು, ಭಾರಿ ಪ್ರಮಾಣದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳು ಪತ್ತೆಯಾಗಿವೆ. ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಹಾಗೂ ದಾಖಲೆಗಳ ಜಾಲಾಟವನ್ನು ಮುಂದುವರಿಸಿದ್ದಾರೆ.
ಮಡಿಕೇರಿ ನಗರಸಭೆ ಆಯುಕ್ತ ಹೆಚ್.ಆರ್. ರಮೇಶ್ ಅವರ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಆದಾಯಕ್ಕೂ ಮೀರಿ ಅಸ್ತಿ ಗಳಿಕೆ ಆರೋಪ ಹಿನ್ನಲೆ, ಕಲಬುರಗಿಯಲ್ಲಿ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಶ್ವರಿ ಅವರ ಮಹಾಲಕ್ಷ್ಮಿ ಲೇಔಟ್ನಲ್ಲಿರುವ ಅವರ ಬಬಲಾದ್ ನಿವಾಸ, ಖಾದ್ರಿ ಚೌಕ್ನಲ್ಲಿರುವ ಮತ್ತೊಂದು ಮನೆ ಹಾಗೂ ಅವರ ಜೆಸ್ಕಾಂ ಕಚೇರಿ ಸೇರಿದಂತೆ ಒಟ್ಟು ಮೂರು ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.
ಹುಬ್ಬಳ್ಳಿಯ ಹೆಸ್ಕಾಂ ಕಚೇರಿಯ AEE ಕಿರಣಕುಮಾರ್ ಬೈಂದೂರ್ ಅವರಿಗೆ ಸೇರಿದ ನಾಲ್ಕು ಪ್ರಮುಖ ಸ್ಥಳಗಳ ಮೇಲೆ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಕಿರಣಕುಮಾರ್ ಅವರ ಪತ್ನಿ ಪ್ರೀತಿ ಸಹ ಹೆಸ್ಕಾಂನಲ್ಲಿಯೇ ಎಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಕ್ಷಯ್ ಪಾರ್ಕ್ನಲ್ಲಿರುವ ಅವರ ನಿವಾಸ, ತಬೀಬ್ ಲ್ಯಾಂಡ್ನಲ್ಲಿರುವ ಕಿರಣಕುಮಾರ್ ಕಚೇರಿ, ಪ್ರೀತಿ ಅವರು ಕೆಲಸ ಮಾಡುತ್ತಿರುವ ಗೋಪನಕೊಪ್ಪ ಹೆಸ್ಕಾಂ ಕಚೇರಿ ಹಾಗೂ ಕಿರಣಕುಮಾರ್ ಅವರ ಸಹೋದರನ ಮನೆ ಮೇಲೆ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕ ಆಗಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ಗೌಡ ಎಂಬುವವರ ಮೇಲೆಯೂ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಲೋಕಾಯುಕ್ತ ಪೊಲೀಸರು ಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಶಿವಕುಮಾರ್ ನೇತೃತ್ವದಲ್ಲಿ ಒಟ್ಟು ೮ ಸ್ಥಳಗಳಲ್ಲಿ ಸುದೀರ್ಘ ಪರಿಶೀಲನೆ ನಡೆದಿದೆ. ಈ ವೇಳೆ ದರ್ಶನ್ ಗೌಡ ಅವರಿಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲೇ ವಾಣಿಜ್ಯ ಸಂಕೀರ್ಣಗಳು ಸೇರಿದಂತೆ ಒಟ್ಟು ೭ ಐಷಾರಾಮಿ ಮನೆಗಳು ಹಾಗೂ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆಯಾಗಿದೆ.
ಕಳೆದ ತಿಂಗಳಷ್ಟೇ ಸೇವಾ ನಿವೃತ್ತಿ ಹೊಂದಿದ್ದ ಬೀದರ್ನ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ ಅವರ ನಿವಾಸಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ಧರಾಜು ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಹನುಮಂತರಾಯ ನೇತೃತ್ವದ ತಂಡವು ಬೀದರ್ ನಗರದ ಹಕ್ ಕಾಲನಿ ಮನೆ, ಹುಮನಾಬಾದ್ನ ಟೀಚರ್ ಕಾಲನಿ ಮನೆ ಹಾಗೂ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ್ದಾರೆ.
ಚಿತ್ರದುರ್ಗದ ಸಹಾಯಕ ಕಮಿಷನರ್ ಕಚೇರಿಯ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು, ಲಂಚ ಸ್ವೀಕರಿಸುತ್ತಿದ್ದ ಎಫ್ಡಿಎ (FDA) ಬಸವರಾಜ ಎಂಬುವವರನ್ನು ರೆಡ್ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಕೆಲ್ಲೋಡು ಗ್ರಾಮದ ಹನುಮಂತಪ್ಪ ಎಂಬುವವರಿಂದ ಪಹಣಿ ತಿದ್ದುಪಡಿ ಮಾಡಿಕೊಡಲು ಬಸವರಾಜ 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಹಾಕಿಕೊಂಡಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ