ಲೋಕಸಭೆ ಚುನಾವಣೆಯಲ್ಲಿ ಮತ ನೀಡಿ ಹೆಚ್ಚು ಸ್ಥಾನ ಗೆಲ್ಲಿಸದಿದ್ದರೆ ಗ್ಯಾರಂಟಿ ಯೋಜನೆ ರದ್ದು ಎಂದು ಹೇಳಿರುವ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದ್ದಾರೆ.
ತಾಲ್ಲೂಕಿನ ಶ್ರೀಗಿರಿಪುರದಲ್ಲಿ ಮಂಗಳವಾರ ನಡೆದ ಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು, ‘ಬಿಜೆಪಿಯ ಧರ್ಮ ರಾಜಕಾರಣದ ಮಂತ್ರಾಕ್ಷತೆ ಬೇಕಾ ಅಥವಾ ಜನಸಾಮಾನ್ಯರ ಜೀವನ ಬದಲಿಸುತ್ತಿರುವ ಕಾಂಗ್ರೆಸ್‌ನ ಗ್ಯಾರಂಟಿ ಬೇಕಾ ಎಂದು ಜನ ಈ ಚುನಾವಣೆಯಲ್ಲಿ ತೀರ್ಮಾನ ಮಾಡಬೇಕು ಎಂದರು.
ಒಂದು ವೇಳೆ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಾವೇನಾದರೂ ಕಡಿಮೆ ಸ್ಥಾನ ಗಳಿಸಿದರೆ, ಜನ ಗ್ಯಾರಂಟಿಗಳನ್ನು ತಿರಸ್ಕರಿಸಿದ್ದಾರೆ ಎಂದರ್ಥ. ಆಗ, ಅವುಗಳನ್ನು ರದ್ದು ಮಾಡಿ ನಾವೂ ಅವರಂತೆ ಮಂದಿರದ ರಾಜಕಾರಣ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ದೇವಸ್ಥಾನ ಕಟ್ಟಿ ಅಕ್ಷತೆ ಕೊಟ್ಟು ಮತ ಹಾಕಿಸಿಕೊಳ್ಳುತ್ತೇವೆ. ಇದನ್ನೇ ಸಿದ್ದರಾಮಯ್ಯ ಅವರಿಗೆ ಹೇಳಿದ್ದೀನಿ. ಜನರು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಲಿಲ್ಲ ಎಂದರೇ ನಿಮ್ಮ ಗ್ಯಾರಂಟಿ ಬೇಡ ಎಂದರ್ಥವಾಗುತ್ತದೆ. ಆ ದುಡ್ಡು ತಗೊಂಡು ನಾವು ಅಭಿವೃದ್ಧಿ ಮಾಡ್ತೀವಿ ಎಂದು ಶಾಸಕ ಬಾಲಕೃಷ್ಣ ಹೇಳಿದ್ದಾರೆ.