ಲೋಕಸಭೆ ಎಲೆಕ್ಷನ್ ಸಮೀಪಿಸುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಸರತ್ತು ಜೋರಾಗಿದೆ. ರಾಜ್ಯದಲ್ಲಿ ಬಿಜೆಪಿ – ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸುವ ಮುನ್ನ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಿಸಿದೆ.
195 ಲೋಕಸಭಾ ಕ್ಷೇತ್ರಗಳ ಮೊದಲ ಪಟ್ಟಿಯನ್ನ ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡುತ್ತಿದ್ದಂತೆ. ಕರ್ನಾಟಕ ರಾಜ್ಯದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಒಟ್ಟು 39 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ್ದು, ಇದರಲ್ಲಿ ಕರ್ನಾಟಕದ 7 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಕೂಡ ಇದೆ. ಇನ್ನು ಎರಡು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿ ಹೋಲ್ಡ್ ಮಾಡಿದೆ.
ಇಂದು (ಮಾರ್ಚ್ 08) ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣುಗೇಪಾಲ್, ಅಜಯ್ ಮಕೇನ್, ಪವನ್ ಖೇರಾ ಅವರು ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು.
ಕರ್ನಾಟಕದ 7, ತೆಲಂಗಾಣದ 4, ಛತ್ತೀಸ್ಗಡದ 6, ಕೇರಳದ 15, ಮೇಘಾಲಯದ 2, ನಾಗಲ್ಯಾಂಡ್, ಸಕ್ಕಿಂ ಹಾಗೂ ತ್ರಿಪುರದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಘೋಷಿಸಿದೆ. ಈ ಮೂಲಕ ಒಟ್ಟು 39 ಅಭ್ಯರ್ಥಿಗಳ ಪಟ್ಟಿಯನ್ನು ಬಿಡಗಡೆ ಮಾಡಿದೆ.
ಕರ್ನಾಟಕ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
1) ಬಿಜಾಪುರ ( ಪರಿಶಿಷ್ಟ ಜಾತಿ) – ಎಚ್ ಆರ್ ಅಲಗೂರು
2) ಶಿವಮೊಗ್ಗ – ಗೀತಾ ಶಿವರಾಜ್‌ಕುಮಾರ್
3) ಹಾಸನ – ಶ್ರೇಯಸ್ ಪಟೇಲ್
4) ತುಮಕೂರು – ಎಸ್‌ಪಿ ಮುದ್ದಹನುಮೇಗೌಡ
6) ಮಂಡ್ಯ – ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
6) ಬೆಂಗಳೂರು ಗ್ರಾಮಾಂತರ – ಡಿ.ಕೆ.ಸುರೇಶ್
7) ಹಾವೇರಿ: ಆನಂದ್ ಸ್ವಾಮಿ ಗಡ್ಡ ದೇವರಮಠ
ಕರ್ನಾಟಕ ಕಾಂಗ್ರೆಸ್ ಹೋಲ್ಡ್ ನಲ್ಲಿ ಇಟ್ಟರುವ ಅಭ್ಯರ್ಥಿಗಳ ಪಟ್ಟಿ
1) ಉಡುಪಿ – ಚಿಕ್ಕಮಗಳೂರು – ಡಾ. ಜಯಪ್ರಕಾಶ್ ಹೆಗ್ಡೆ ( ಕಾಂಗ್ರೆಸ್ ಸೇರ್ಪಡೆಗೆ ಕಾಯುತ್ತಿದ್ದು ಶೀಘ್ರದಲ್ಲೇ ಸೇರ್ಪಡೆಯಾದ ನಂತರ ಹೆಸರು ಘೋಷಣೆಯಾಗಲಿದೆ.)
2) ಚಿತ್ರದುರ್ಗ (ಪರಿಶಿಷ್ಟ ಜಾತಿ) – ಬಿಎನ್ ಚಂದ್ರಪ್ಪ
ತೆಲಂಗಾಣದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ
ಜಹೀರಾಬಾದ್ ಕ್ಷೇತ್ರ- ಸುರೇಶ್ ಕುಮಾರ್ ಶೆಟ್ಕರ್,
ಚೇವೆಲ್ಲಾ ಕ್ಷೇತ್ರ ಸುನೀತಾ ಮಹೇಂದರ್ ರೆಡ್ಡಿ,
ನಲ್ಗೊಂಡ ಕ್ಷೇತ್ರ- ಕುಂದೂರು ರಘುವೀರ್,
ಮಹಬೂಬಾಬಾದ್ ಕ್ಷೇತ್ರ (ಎಸ್‌ಟಿ )- ಪೋರಿಕ ಬಲರಾಮ್ ನಾಯಕ್
ಕೇರಳ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ
- ವಯನಾಡ್ (ಕೇರಳ): ರಾಹುಲ್ ಗಾಂಧಿ
- ಕಾಸರಗೋಡು (ಕೇರಳ): ರಾಜಮೋಹನ್ ಉಣ್ಣಿತ್ತಾನ್
- ಕಣ್ಣೂರು (ಕೇರಳ): ಕೆ ಸುಧಾಕರನ್
- ವಡಕರ (ಕೇರಳ): ಶಫಿ ಪರಂಬಿಲ್
- ಕೋಝಿಕ್ಕೋಡ್ (ಕೇರಳ): ಎಂಕೆ ರಾಘವನ್
- ಪಾಲಕ್ಕಾಡ್ (ಕೇರಳ): ವಿಕೆ ಶ್ರೀಕಂಠನ್
- ಅಲತೂರ್(ಎಸ್‌ಸಿ) (ಕೇರಳ): ರೆಮ್ಯಾ ಹರಿದಾಸ್
- ತ್ರಿಶೂರ್ (ಕೇರಳ): ಕೆ ಮರಳೀಧರನ್
- ಚಾಲಕ್ಕುಡಿ (ಕೇರಳ): ಬೆನ್ನಿ ಬಹನ್ನಾನ್
- ಎರ್ನಾಕುಲಂ(ಕೇರಳ): ಹಿಬಿ ಇಡೆನ್
- ಇಡುಕ್ಕಿ(ಕೇರಳ): ಡೀನ್ ಕುರಿಯಾಕೋಸ್
- ಮಾವೇಲಿಕರ(ಎಸ್‌ಸಿ)(ಕೇರಳ): ಕೋಡಿಕುನ್ನಿಲ್ ಸುರೇಶ್
- ಪಟ್ಟಣಂತಿಟ್ಟ(ಕೇರಳ): ಆ್ಯಂಟೋ ಆ್ಯಂಟೋನಿ
- ಅತ್ತಿಂಗಲ್(ಕೇರಳ): ಅಡೂರ್ ಪ್ರಕಾಶ್
2019ರ ಲೋಕಸಭಾ ಚುನಾವಣೆಯಲ್ಲಿ ಒಟ್ಟು 28 ಕ್ಷೇತ್ರಗಳಲ್ಲಿ 25 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಈ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ಕಾಂಗ್ರೆಸ್ ರಾಜ್ಯದಲ್ಲಿ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲುವು ಕಂಡಿತ್ತು. ಈ ಬಾರಿ 20-25 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಹೊಂದಿದ್ದು, ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.
ಉಳಿದ ಪಟ್ಟಿ ಈ ಕೆಳಗಿನಂತಿವೆ