Saturday, July 27, 2024

ಲೋಕಸಭಾ ಚುನಾವಣೆ : ಎಎಪಿ – ಕಾಂಗ್ರೆಸ್ ನಡುವೆ ‘ಮೈತ್ರಿ’ ಘೋಷಣೆ

Most read

ಲೋಕಸಭಾ ಚುನಾವಣೆಯಲ್ಲಿ ಎಎಪಿ -ಕಾಂಗ್ರೆಸ್ ನಡುವೆ ಮೈತ್ರಿ ಘೋಷಣೆಯಾಗಿದೆ. ಶನಿವಾರ ದೆಹಲಿಯಲ್ಲಿ ಔಪಚಾರಿಕವಾಗಿ ಲೋಕಸಭಾ ಸೀಟು ಹಂಚಿಕೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಇಂಡಿಯಾ ಮೈತ್ರಿಕೂಟದ ಭಾಗವಾಗಿರು ಎಎಪಿ ಈಗ ಅಧಿಕೃತವಾಗಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದು, ಮುಂದಿನ ದೆಹಲಿ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಮಾಡಿಕೊಂಡಿವೆ. ದೆಹಲಿಯಲ್ಲಿ ಒಟ್ಟು ಏಳು ಲೋಕಸಭಾ ಕ್ಷೇತ್ರಗಳಿದ್ದಯ, ನಾಲ್ಕು ಕ್ಷೇತ್ರ ಎಎಪಿ ಉಳಿದ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಒರ್ಧಿಸಲು ಪರಸ್ಪರ ಒಪ್ಪಿಕೊಂಡಿದೆ.

ಒಪ್ಪಂದದ ಪ್ರಕಾರ, ಕಾಂಗ್ರೆಸ್ ಈಶಾನ್ಯ, ಚಾಂದಿನಿ ಚೌಕ್, ವಾಯವ್ಯ ಕ್ಷೇತ್ರವನ್ನು ಪಡೆದುಕೊಂಡರೆ . ಎಎಪಿ ನವದೆಹಲಿ, ಪೂರ್ವ ದೆಹಲಿ, ಪಶ್ಚಿಮ ದೆಹಲಿ ಮತ್ತು ದಕ್ಷಿಣ ದೆಹಲಿ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಮುಕುಲ್ ವಾಸ್ನಿಕ್ ಜಂಟಿಯಾಗಿ ತಿಳಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ನಾಯಕರ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಗುಜರಾತ್, ಹರಿಯಾಣ, ಚಂಡೀಗಢ ಮತ್ತು ಗೋವಾ ಲೋಕಸಭಾ ಚುನಾವಣೆಗೆ ಮೈತ್ರಿ ಚಿಸ್ತರಿಸಿದ್ದು, ಸೀಟು ಹಂಚಿಕೆಗೆ ಪಕ್ಷಗಳು ಸಹಮತ ವ್ಯಕ್ತಪಡಿಸಿವೆ. ಎಎಪಿ ಗುಜರಾತ್‌ನ ಭರೂಚ್ ಮತ್ತು ಭಾವನಗರ ಕ್ಷೇತ್ರಗಳಲ್ಲಿ ಎರಡು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಹರಿಯಾಣದಲ್ಲಿ ಎಎಪಿ ಒಂದು ಸ್ಥಾನದಲ್ಲಿ ಸ್ಪರ್ಧಿಸಲಿದೆ. ಚಂಡೀಗಢದ ಒಂದೇ ಒಂದು ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಸ್ಪರ್ಧಿಸಲಿದೆ ಮತ್ತು ಗೋವಾದಲ್ಲಿಯೂ ಕಾಂಗ್ರೆಸ್ ಎರಡೂ ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು ಉಳಿದ ಎಲ್ಲಾ ಕ್ಷೇತ್ರದಲ್ಲಿ ಎಎಪಿ ಸ್ಪರ್ಧಿಸಲಿದೆ ಎಂದು ವಾಸ್ನಿಕ್ ಹೇಳಿದರು.

More articles

Latest article