ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷೆ ಹೆಚ್ಚುತ್ತಲೇ ಇದೆ. ಕಳೆದ ಹಲವು ತಿಂಗಳಿನಿಂದ ಈಶ್ವರಪ್ಪ ತಮ್ಮ ಮಗ ಕಾಂತೇಶ್‌ಗೆ ಲೋಕಸಭಾ ಟಿಕೆಟ್ ಕೊಡಿಸಲು ಓಡಾಡುತ್ತಿದ್ದಾರೆ. ಇತ್ತ ಬಿಸಿ ಪಾಟೀಲ್ ಕೂಡ ಟಿಕೆಟ್ ಬೇಕೆ ಬೇಕು ಎಂದು ಪಣತೊಟ್ಟಿದ್ದಾರೆ. ಆದರೆ ಇಬ್ಬರಿಗೂ ಟಿಕೆಟ್ ಕೈತಪ್ಪಿ ಬಸವರಾಜ್ ಬೊಮ್ಮಾಯಿಗೆ ಟಿಕೆಟ್ ಫೈನಲ್ ಆಗಿದ್ದು, ಈಶ್ವರಪ್ಪ ಅವರನ್ನು ಕೆರಳಿಸಿದೆ.
ಹೌದು, ಹಾವೇರಿ ಯಲ್ಲಿ ತಮ್ಮಪುತ್ರನಿಗೆ ಟಿಕೆಟ್ ನೀಡದಿದ್ದರೆ ಶಿವಮೊಗ್ಗ ಲೋಕಸಭಾ ಕ್ಷೇತೃದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ತಾವೇ ಕಣಕ್ಕಿಳಿಯುವುದಾಗಿ ಕೆ.ಎಸ್ ಈಶ್ವರಪ್ಪ ವರಿಷ್ಠರಿಗೆ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.
ಮಗನಿಗೆ ಟಿಕೆಟ್ ಕೈತಪ್ಪಲು ಯಡಿಯೂರಪ್ಪ ಮತ್ತವರ ಪುತ್ರರ ಕೈವಾಡವಿದೆ. ಯಡಿಯೂರಪ್ಪ ಅವರು ತಮ್ಮ ಮಕ್ಕಳ ರಾಜಕೀಯ ಭವಿಷ್ಯಕ್ಕಾಗಿ ನನ್ನ ಮಗನ ರಾಜಕೀಯ ಭವಿಷ್ಯವನ್ನು ತುಳಿಯುತ್ತಿದ್ದಾರೆ ಎಂದು ಕೆಂಡಾಮಂಡಲವಾಗಿರುವ ಈಶ್ವರಪ್ಪ ಶಿವಮೊಗ್ಗ ಕ್ಷೇತ್ರದಲ್ಲಿ ಬಿ ವೈ ರಾಘವೇಂದ್ರ ಅವರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.
ಈಶ್ವರಪ್ಪ ಅವರ ಆಪ್ತ ಹೊಲಯದಲ್ಲೇ ಈ ಚರ್ಚೆ ನಡೆಯುತ್ರಿದ್ದು ಇನ್ನೊಂದ್ ಎರಡು ಮೂರು ದಿನಗಳಲದಲಿ ಈ ಕುರಿತು ಸ್ಪಷ್ಟ ಚಿತ್ರಣ ಕಾಣಸಿಗಲಿದೆ.