Saturday, December 7, 2024

ಮೈಸೂರು – ಕೊಡಗು ಲೋಕಸಭಾ ಕ್ಷೇತ್ರಕ್ಕೆ ನಾನೂ ಟಿಕೆಟ್‌ ಆಕಾಂಕ್ಷಿ: ಎಚ್‌.ವಿಶ್ವನಾಥ್‌

Most read

ನಾನೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಆಕಾಂಕ್ಷಿ. ಕಾಂಗ್ರೆಸ್‌ನಿಂದ ಟಿಕೆಟ್‌ಗಾಗಿ ಪ್ರಯತ್ನಿಸುತ್ತಿದ್ದೇನೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಟಿಕೆಟ್‌ಗೆ ಪ್ರಯತ್ನಿಸುವುದರಲ್ಲಿ ತಪ್ಪೇನಿದೆ? ಪಕ್ಷದಲ್ಲಿ ಎಲ್ಲರಿಗೂ ಟಿಕೆಟ್ ಕೊಡುತ್ತಾರೆ ಎಂದು ಪ್ರಯತ್ನ ಮಾಡುವುದಲ್ಲ. ಪ್ರಯತ್ನ ಮಾಡುತ್ತಾ ಮಾಡುತ್ತಾ ಸಿಕ್ಕರೂ ಸಿಗಬಹುದು, ಸಿಕ್ಕದೆಯೂ ಇರಬಹುದು ಎಂದು ಹೇಳಿದ್ದಾರೆ.

ಹೈಕಮಾಂಡ್‌ನಲ್ಲೀಗ ಮಲ್ಲಿಕಾರ್ಜುನ ಖರ್ಗೆ ಇದ್ದಾರೆ. ರಾಜಕೀಯವಾಗಿ ಎಲ್ಲಾ ರೀತಿಯಲ್ಲೂ ನಮ್ಮನ್ನು ಪ್ರೋತ್ಸಾಹಿಸಿದವರು ಅವರು.  ನಾನು ಸಂಸದನಾಗಿ ಈಗಾಗಲೇ ಕೆಲಸ ಮಾಡಿದ್ದೇನೆ, ನನ್ನ ಅನುಭವದ ಆಧಾರದ ಮೇಲೆ ಒಂದು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

More articles

Latest article