ಸಂಸದ ಪ್ರತಾಪ್ ಸಿಂಹಗಿಲ್ಲ ಲೋಕಸಭಾ ಟಿಕೆಟ್ : ವಿಜಯೇಂದ್ರ ಹೇಳಿದ್ದೇನು ಗೊತ್ತೇ?

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಿಜೆಪಿ (BJP) ಹೈಕಮಾಂಡ್​​ ಮೈಸೂರಿನಲ್ಲಿ ಈ ಬಾರಿ ಯದುವೀರ್​ ಒಡೆಯರ್​ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಮೂಲಕ ಸಂಸದ ಪ್ರತಾಪ್​ ಸಿಂಹ ಅವರಿಗೆ ಟಿಕೆಟ್​ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಈ ಬಗ್ಗೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ನಾಲ್ಕು ಗೋಡೆಗಳ ಮಧ್ಯೆ ಚರ್ಚೆ ಆಗಿರೋದನ್ನು ನಾನು ಹೇಳಲ್ಲ. ಆದರೆ, 28 ಕ್ಷೇತ್ರಗಳಿಗೆ ಉತ್ತಮ ಅಭ್ಯರ್ಥಿ ಕೊಡುತ್ತೇವೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 3-4 ದಿನಗಳಲ್ಲಿ ಅಭ್ಯರ್ಥಿ ಆಯ್ಕೆ ಅಂತಿಮಗೊಳ್ಳಲಿದೆ. 2 ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ರಾಜ್ಯದಲ್ಲಿ ಬಿಜೆಪಿ ಪರವಾಗಿದೆ ವಾತಾವರಣವಿದೆ. ನರೇಂದ್ರ ಮೋದಿಯವರ ಯೋಜನೆಗಳನ್ನು ಜನರು ಮೆಚ್ಚಿದ್ದಾರೆ. ನರೇಂದ್ರ ಮೋದಿ ನಾಯಕತ್ವ ಉತ್ತಮ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. 28 ಲೋಕಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿ ಆಯ್ಕೆ ಮುಂದುವರೆದಿದೆ ಎಂದರು.

ರಾಜ್ಯದ ಎಲ್ಲ ಅಭ್ಯರ್ಥಿ ಬಗ್ಗೆಯೂ ವರಿಷ್ಠರು ಅವಲೋಕಿಸಿದ್ದಾರೆ. 23-24-25 ಪ್ರಶ್ನೆ ಅಲ್ಲ, ಅತ್ಯುತ್ತಮ ಫಲಿತಾಂಶದ ಇತಿಹಾಸವನ್ನು ಬಿಜೆಪಿ ನಿರ್ಮಿಸಲಿದೆ. 3-4 ದಿನಗಳಲ್ಲಿ ಅಭ್ಯರ್ಥಿ ಅಯ್ಕೆ ಅಂತಿಮಗೊಳ್ಳಲಿದೆ ಎಂದು ತಿಳಿಸಿದರು.

More articles

Latest article

Most read