ಲೋಕಸಭಾ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಆ ದಿಸೆಯಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಇಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ.
ನಾಮಪತ್ರ ಸಲ್ಲಿಸಲು ಏಪ್ರಿಲ್, 04 ಕೊನೆಯ ದಿನವಾಗಿದೆ. ಏಪ್ರಿಲ್, 05 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್, 08 ರಂದು ನಾಮಪತ್ರ ವಾಪಸ್ಸು ಪಡೆಯಲು ಕಡೆಯ ದಿನವಾಗಿದೆ. ಏಪ್ರಿಲ್, 26 ರಂದು ಮತದಾನ ನಡೆಯಲಿದ್ದು, ಜೂನ್, 04 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ
ಉಡುಪಿ-ಚಿಕ್ಕಮಗಳೂರು
ಹಾಸನ
ದಕ್ಷಿಣ ಕನ್ನಡ
ಚಿತ್ರದುರ್ಗ
ತುಮಕೂರು
ಮಂಡ್ಯ
ಮೈಸೂರು
ಚಾಮರಾಜನಗರ
ಬೆಂಗಳೂರು ಗ್ರಾಮಾಂತರ
ಬೆಂಗಳೂರು ಉತ್ತರ
ಬೆಂಗಳೂರು ದಕ್ಷಿಣ
ಚಿಕ್ಕಬಳ್ಳಾಪುರ
ಕೋಲಾರ