ಪ್ರೀತಿ ನಿರಾಕರಿಸಿದ ಯುವತಿ; ಆತ್ಮಹತ್ಯೆಗೆ ಶರಣಾದ ಟೆಕ್ಕಿ

Most read

ಬೆಂಗಳೂರು: ಪ್ರೀತಿಸಿದ ಹುಡುಗಿ ಕೈ ಬಿಟ್ಟಳು ಎಂದು ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮೃತ ಯುವಕನನ್ನು  25 ವರ್ಷದ ಸತೀಶ್ ಕುಮಾರ್ ಎಂದು ಗುರುತಿಸಲಾಗಿದೆ. ಬೆಳ್ಳಂದೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸತೀಶ್ ಮತ್ತು ಯುವತಿಯೊಬ್ಬಳು ಪರಸ್ಪರ ಪ್ರೀತಿಸುತ್ತಿದ್ದರು. ಹೀಗೆ ಕಳೆದ ಮೂರು ವರ್ಷಗಳಿಂದ ಪ್ರೀತಿಯಲ್ಲಿ ತೊಡಗಿದ್ದರು. ವಿವಾಹವಾಗಲೂ ನಿರ್ಧರಿಸಿದ್ದರು ಎನ್ನಲಾಗಿದೆ. ಈ ವಿಚಾರ ಮನೆಯವರಿಗೆ ಗೊತ್ತಾಗಿ ಇಬ್ಬರ ಪ್ರೀತಿಯಲ್ಲಿ ಬಿರುಕು ಇವರ ಪ್ರೀತಿಯ ವಿಷಯ ಯುವತಿಯ ಪೋಷಕರಿಗೆ ತಿಳಿದ ನಂತರ ಪ್ರೀತಿಯಲ್ಲಿ ಬಿರುಕು ಕಾಣಿಸಿಕೊಂಡಿದೆ.

ಬೆಂಗಳೂರಿನ ಕಾಲೇಜಿನಲ್ಲಿ ಓದುತ್ತಿದ್ದ ಸಂದರ್ಭದಲ್ಲಿ ಪರಸ್ಪರ ಪ್ರೀತಿಸಲು ಆರಂಭಿಸಿದ್ದರು. ಓದು ಮುಗಿದ ಕೂಡಲೇ ಸತೀಶ್‌ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದಾನೆ. ಆದರೆ, ಇವರ ಪ್ರೀತಿಗೆ ಯುವತಿಯ ಪೋಷಕರು ಅಡ್ಡಗಾಲು ಹಾಕಿದ್ದರು.  ಅವರಿಗೆ ಈ ಯುವಕ ಇಷ್ಟವಿರಲಿಲ್ಲ. ಈ ಸಂಬಂಧ 4 ತಿಂಗಳ ಹಿಂದೆ ಯುವತಿಯ ಪೋಷಕರು ಸತೀಶ್​ ವಿರುದ್ಧ ಕಿರುಕುಳ ಆರೋಪ ಹೊರಿಸಿ ಇಂದಿರಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಂತರ ಪೊಲೀಸರು ಸತೀಶ್​ ಅವರನ್ನು ಠಾಣೆಗೆ ಕರೆಸಿ ಬುದ್ಧಿವಾದ ಹೇಳಿದ್ದರು. ಬಳಿಕ ಕೆಲ ಸಮಯ ಇಬ್ಬರೂ ದೂರ ಉಳಿದಿದ್ದರು. ಹೊಸ ವರ್ಷದ ದಿನ ಸತೀಶ್‌ ಮತ್ತೆ ಯುವತಿಗೆ ಕರೆ ಮಾಡಿ ತನ್ನ ಪ್ರೀತಿಯ ನಿವೇದನೆಯನ್ನು ಹಂಚಿಕೊಂಡಿದ್ದಾನೆ. ಆದರೆ ಯುವತಿ ಈ ಆಹ್ವಾನವನ್ನು ತಿರಸ್ಕರಿಸಿದ್ದಾಳೆ. ಇದರಿಂದ ಮನನೊಂದ ಸತೀಶ ಆತ್ಮಹತ್ಯೆ ಶರಣಾಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ಬಾಣಸವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

More articles

Latest article