ದೆಹಲಿಯ ಸಿಜೆಪಿ ಪ್ರತಿಭಟನೆಗೆ ಎಂ.ಕೆ. ಸ್ಟಾಲಿನ್ ಬೆಂಬಲ: “ಭಿನ್ನಾಭಿಪ್ರಾಯ ಅಪರಾಧವಲ್ಲ”

ಶಾಂತಿಯುತ ಪ್ರತಿಭಟನಾಕಾರರ ಮೇಲಿನ ದಮನಕ್ಕೆ ಖಂಡನೆ; ಜ್ಞಾನೇಶ್ ಕುಮಾರ್ ರಾಜೀನಾಮೆ ಅನಿವಾರ್ಯ

ಚೆನ್ನೈ: ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಡಿಎಂಕೆ ಅಧ್ಯಕ್ಷ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ಬೆಂ ಬಲ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದು ಅಪರಾಧವಲ್ಲ ಎಂದು ಹೇಳಿರುವ ಅವರು, ತಮ್ಮ ಹಕ್ಕುಗಳನ್ನು ರಕ್ಷಿಸಲು ಧ್ವನಿ ಎತ್ತುವವರನ್ನು ಮೌನಗೊಳಿಸುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಮತ್ತು ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಕೈಗೊಳ್ಳಲಾಗುತ್ತಿರುವ ದಮನಕಾರಿ ಕ್ರಮಗಳು 1975ರಿಂದ 1977ರವರೆಗಿನ ತುರ್ತು ಪರಿಸ್ಥಿತಿಯ ಕರಾಳ ನೆನಪುಗಳನ್ನು ಮತ್ತೆ ಮೂಡಿಸುತ್ತಿವೆ ಎಂದು ಸ್ಟಾಲಿನ್ ಹೇಳಿದ್ದಾರೆ.

ಬಂಧಿತ ನಾಯಕರ ಬಿಡುಗಡೆಗೆ ಆಗ್ರಹ

ದೆಹಲಿಯಲ್ಲಿ ಮಾತ್ರವಲ್ಲದೆ ದೇಶದ ವಿವಿಧ ಭಾಗಗಳಲ್ಲಿ ಬಂಧನಕ್ಕೊಳಗಾಗಿರುವ ರಾಜಕೀಯ ನಾಯಕರು, ವಿದ್ಯಾರ್ಥಿಗಳು ಹಾಗೂ ಯುವ ಪ್ರತಿಭಟನಾಕಾರರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಚೆನ್ನೈನಲ್ಲಿ ಪ್ರತಿಭಟನಾಕಾರರ ವಿರುದ್ಧ ಪೊಲೀಸ್ ದಮನ ನಡೆಯುತ್ತಿದೆ ಎಂದು ಆರೋಪಿಸಿರುವ ಸ್ಟಾಲಿನ್, ಬಿಜೆಪಿ ವಿಸ್ತರಣೆಯಂತೆ ವರ್ತಿಸುತ್ತಿದೆ ಎನ್ನಲಾದ ಟಿವಿಕೆ ಸರ್ಕಾರದ ಕ್ರಮವನ್ನೂ ತೀವ್ರವಾಗಿ ಖಂಡಿಸಿದ್ದಾರೆ.

“ಶಾಂತಿಯುತವಾಗಿ ತಮ್ಮ ಪ್ರಜಾಸತ್ತಾತ್ಮಕ ಪ್ರತಿಭಟನೆಯ ಹಕ್ಕನ್ನು ಚಲಾಯಿಸುತ್ತಿರುವ ಯುವಕರ ಮೇಲಿನ ದಾಳಿಯನ್ನು ಕೇಂದ್ರ ಸರ್ಕಾರ ತಕ್ಷಣ ನಿಲ್ಲಿಸಬೇಕು. ಭಿನ್ನಾಭಿಪ್ರಾಯ ಅಪರಾಧವಲ್ಲ. ಪ್ರಜಾಪ್ರಭುತ್ವವನ್ನು ರಕ್ಷಿಸಲು ಧ್ವನಿ ಎತ್ತುವವರನ್ನು ಮೌನಗೊಳಿಸಿ ಪ್ರಜಾಪ್ರಭುತ್ವವನ್ನು ಉಳಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಸಿಇಸಿ ರಾಜೀನಾಮೆ ಅನಿವಾರ್ಯ: ಸ್ಟಾಲಿನ್

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ವಿಚಾರದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ ಎಂದು ಸ್ಟಾಲಿನ್ ಸ್ಪಷ್ಟಪಡಿಸಿದ್ದಾರೆ.

ಚುನಾವಣಾ ಆಯೋಗದ ಸಾಂಸ್ಥಿಕ ವ್ಯವಸ್ಥೆಗೆ ಆಗಿರುವ ಹಾನಿಯನ್ನು ಸರಿಪಡಿಸುವುದರ ಜೊತೆಗೆ, ಆಯೋಗದ ಸ್ವಾತಂತ್ರ್ಯ ಮತ್ತು ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

More articles

Latest article

Most read