ಬೆಂಗಳೂರು: ಮ ನರೇಗಾ ಯೋಜನೆಯನ್ನು ರದ್ದುಗೊಳಿಸಿರುವುದನ್ನು ಖಂಡಿಸಿ ನಿರ್ಣಯ ಅಂಗೀಕರಿಸಲು ಜ.22 ರಿಂದ 31ರವರೆಗೆ ವಿಧಾನ ಮಂಡಲದ ಜಂಟಿ ಅಧಿವೇಶನ ನಡೆಯಲಿದೆ. ವಿಧಾನ ಮಂಡಲದ ಜಂಟಿ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಭಾಷಣ ಮಾಡಲಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ವಿಬಿ ಜಿ ರಾಮ್ ಜಿ ಕಾಯ್ದೆ ಕುರಿತು ಕಾಂಗ್ರೆಸ್ ಸರ್ಕಾರವು ಆಕ್ಷೇಪ ವ್ಯಕ್ತಪಡಿಸುತ್ತಾ ಬಂದಿದೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದರ ಕುರಿತು ಚರ್ಚಿಸಲು ಎರಡು ದಿನಗಲ ಕಾಲ ವಿಧಾನ ಮಂಡಲದ ಜಂಟಿ ಅಧಿವೇಶನ ಕರೆಯುವುದಾಗಿ ತಿಳಿಸಿದ್ದರು.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜನವರಿ 22ರಿಂದ 31ರ ವರೆಗೆ ವಿಶೇಷ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ. ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ವಿವರ ನೀಡಿದರು.
ಕೇಂದ್ರ ಸರ್ಕಾರ ಮನರೇಗಾ ಯೋಜನೆಯನ್ನು ರದ್ದುಗೊಳಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೊಳಿಸಲಾಗಿದೆ. ಇದು ಗ್ರಾಮೀಣಾಭಿವೃದ್ಧಿಗೆ ಮಾರಕವಾಗಿದೆ. ಆದ್ದರಿಂದ ವಿಬಿಜಿ ರಾಮ್ ಜಿ ಕಾಯ್ದೆಯನ್ನು ಹಿಂಪಡೆದು ಮನರೇಗಾ ಕಾಯ್ದೆಯನ್ನೇ ಮರು ಸ್ಥಾಪಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನಿರ್ಣಯ ಅಂಗೀಕರಿಸುವ ಸಾಧ್ಯತೆಗಳಿವೆ.
ಕಳೆದ ವಾರ ನಡೆದ ಸಚಿವ ಸಂಪುಟ ಸಭೆಯಲ್ಲೂ ವಿಬಿಜಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ ಸಚಿವ ಸಂಪುಟ ನಿರ್ಣಯ ಅಂಗೀಕರಿಸಿ ಈ ಕಾಯ್ದೆ ವಿರುದ್ಧ ಕಾನೂನು ಹೋರಾಟ ನಡೆಸುವ ತೀರ್ಮಾನವನ್ನು ಕೊಗೊಳ್ಳಲಾಗಿತ್ತು.

