ಸೋಮವಾರ ರಾತ್ರಿ ನೈರುತ್ಯ ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಯುವಕನ ತಲೆಗೆ ಗಾಯವಾಗಿದ್ದು, ಘಟನೆಯಿಂದಾಗಿ ನೇರಳೆ ಮಾರ್ಗದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ರೈಲು ಸಂಚಾರ ಸ್ಥಗಿತಗೊಂಡಿತ್ತು.
ನೇರಳ ಮಾರ್ಗದ ಮಾಗಡಿ ರಸ್ತೆಯ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರಾತ್ರಿ 8.56ಕ್ಕೆ ಈ ಘಟನೆ ನಡೆದಿದೆ. ವ್ಯಕ್ತಿಯನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಹೇಳಿಕೆಯಲ್ಲಿ ತಿಳಿಸಿದೆ.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಸಾಗರ್ ಎಂದು ಗುರುತಿಸಲಾಗಿದ್ದು, 30ರ ವರ್ಷದ ಸಾಗರ್ ಬೆಂಗಳೂರು ಮೂಲದವನು. ಮೆಟ್ರೋ ನಿಲ್ದಾಣದಲ್ಲಿದ್ದ ಅವರು ಹಳಿಗಳ ಮಧ್ಯಕ್ಕೆ ಹಾರಿ ಬರುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದಿದ್ದಾರೆ. “ಅವರಿಗೆ ಪ್ರಜ್ಞೆ ಇದ್ದು, ತಲೆಗೆ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು BMRCL ಅಧಿಕಾರಿ ಹೇಳಿದ್ದಾರೆ.
6 ತಿಂಗಳಲ್ಲಿ ಆರು ಪ್ರಕರಣ
1 ಜನವರಿ 2024ರಂದು ಇಂದಿರಾ ನಗರ ಮೆಟ್ರೋ ನಿಲ್ದಾಣದಲ್ಲಿ ಮೊಬೈಲ್ ತೆಗೆಯಲು ಟ್ರ್ಯಾಕ್‌ಗೆ ಇಳಿದ ಮಹಿಳೆಯನ್ನು ಮೆಟ್ರೋ ಸಿಬ್ಬಂದಿ ತಮ್ಮ ಸಮಯ ಪ್ರಜ್ಞೆಯಿಂದ ಆಕೆಯನ್ನು ಪ್ರಾಣಾಪಾಯದಿಂದ ಪಾರುಮಾಡಿದ್ದರು.
5 ಜನವರಿ 2024ರಂದು ಜಾಲಹಳ್ಳಿ ಮೆಟ್ರೋ ನಿಲ್ದಾಣ ಮೆಟ್ರೋ ಹಳಿಗೆ ಹಾರಿ ಯುವಕನಿಂದ ಆತ್ಮಹತ್ಯೆಗೆ ಯತ್ನಿಸಿದ್ದು, ಆತನು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
6 ಜನವರಿ 2024 ಜೆ.ಪಿ.ನಗರ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಟ್ರ್ಯಾಕ್ ಮೇಲೆ ಬೆಕ್ಕು ಪ್ರತ್ಯಕ್ಷ, ಆತಂಕಗೊಂಡ ಪ್ರಯಾಣಿಕರು.
12 ರಂದು 2024 ಜ್ಞಾನಭಾರತಿ ಮೆಟ್ರೋ ಸ್ಟೇಷನ್ ನಿಂದ ಪಟ್ಟಣಗೆರೆ ಮೆಟ್ರೋ ಸ್ಟೇಷನ್ ನಡುವಿನ ಯಾಡಕ್ಟ್ ನಲ್ಲಿ ಕಾಣಿಸಿಕೊಂಡಿದ್ದ ಅಪರಿಚಿತ ವ್ಯಕ್ತಿ.
21/03/2024 ಅತ್ತಿಗುಪ್ಪೆ ಮೆಟ್ರೋ ಹಳಿ ಮೇಲೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಸಾವನ್ನಪ್ಪಿದ ಯುವಕ.
10/06/2024 ಹೊಸ್ಕೆರೆ ಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಹಳಿಗೆ ಹಾರಿದ ಯುವಕ; ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಯುವಕ ಬಚಾವ್.