Sunday, September 8, 2024

ಮಹದಾಯಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮತಿ ಕೊಡಿಸುವಂತೆ ಕೇಂದ್ರಕ್ಕೆ ಮನವಿ ಮಾಡಿದ ಬೊಮ್ಮಾಯಿ

Most read

ಳಸಾ ಬಂಡೂರಿ ನಾಲಾ ಮಹದಾಯಿ ತಿರುವು ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಅನುಮತಿ ಕೊಡಿಸುವಂತೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್‌ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ಗುರುವಾರ ಸಂಸದ ಗೋವಿಂದ ಕಾರಜೋಳ ಅವರೊಂದಿಗೆ ಭೇಟಿ ಮಾಡಿ, ಕಳಸಾ ಬಂಡೂರಿ ನಾಲಾ ತಿರುವು ಯೋಜನೆ ಅಡಿ ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಸೇರಿದಂತೆ ಕುಂದಗೋಳ ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳ ಕುಡಿಯುವ ನೀರು ಯೋಜನೆಗೆ 3.90 ಟಿಎಂಸಿ ನೀರು ಬಳಕೆಗೆ ಅನುಮತಿ ನೀಡಲಾಗಿದೆ.

ಕಳಸಾ ಬಂಡೂರಿ ನಾಲಾ ತಿರುವು ಯೋಜನೆಯ ವಿಸ್ತ್ರತ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗ 2022ರ ಡಿಸೆಂಬರ್ 29 ರಂದು ಒಪ್ಪಿಕೊಂಡಿದೆ. ಅರಣ್ಯ ಇಲಾಖೆಯ ಒಪ್ಪಿಗೆಗಾಗಿ ಕಳಸಾ ನಾಲೆ ವ್ಯಾಪ್ತಿಯ 26.9225 ಹೆಕ್ಟೇರ್ ಅರಣ್ಯ ಪದೇಶ ಹಾಗೂ ಬಂಡೂರಾ ನಾಲೆ ವ್ಯಾಪ್ತಿಯ 24.50 ಹೆಕ್ಟೇರ್ ಅರಣ್ಯ ಪ್ರದೇಶದ ಅನುಮತಿಗಾಗಿ ಈಗಾಗಲೇ ಪರಿವೇಶ್ ಪೋರ್ಟಲ್ ಮೂಲಕ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಗೆ ಅನುಮತಿಗಾಗಿ ಮನವಿ ಸಲ್ಲಿಸಲಾಗಿದೆ. ಅಲ್ಲದೇ ಕಳಸಾ ನಾಲಾ ತಿರುವು ಯೋಜನೆ ಅನುಮತಿಗಾಗಿ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ರಾಜ್ಯ ವನ್ಯಜೀವಿ ಮಂಡಳಿಯಿಂದ ಮನವಿ ಸಲ್ಲಿಸಲಾಗಿದೆ. ಈ ವಿಷಯ 2024ರ ಜನೇವರಿ 30 ರಂದು ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸಭೆಯಲ್ಲಿ ಚರ್ಚಿಸಿ ತಡೆ ಹಿಡಿಯಲಾಗಿದೆ. ದಯವಿಟ್ಟು ನಮ್ಮ ಮನವಿಯನ್ನು ಪರಿಗಣಿಸಿ ಯೋಜನೆ ಅನುಷ್ಠಾನಕ್ಕೆ ಅನುಮತಿ ಕೊಡಿಸಿಕೊಡುವಂತೆ ಮನವಿ ಮಾಡಿದ್ದಾರೆ.

More articles

Latest article