Saturday, December 7, 2024

ಸಂವಿಧಾನದಲ್ಲಿ ಎಲ್ಲರಿಗೂ ಮತದಾನದ ಹಕ್ಕಿದೆ; ಸ್ವಾಮೀಜಿ ಹೇಳಿಕೆಗೆ ಸಚಿವ ಮಹದೇವಪ್ಪ ಆಕ್ಷೇಪ

Most read

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಸ್ವಾಮೀಜಿ ಹೇಳಿಕೆಗೆ ಟ್ವೀಟ್​​ ಮೂಲಕ ಪ್ರತಿಕ್ರಿಯೆ ನೀಡಿರುವ ಮಹದೇವಪ್ಪ ಅವರು ಮತದಾನ ಮೂಲಭೂತ ಹಕ್ಕು. ಸಂವಿಧಾನದಲ್ಲಿ ಎಲ್ಲರಿಗೂ ಹಕ್ಕಿದೆ. ದೇಶದ ಎಲ್ಲ ನಾಗರಿಕರಿಗೆ ಮತದಾನ ಹಕ್ಕು ಇದೆ. ಯಾರಾದರೂ ಹಾಗೆ ಹೇಳಿದರೆ ಅದು ತಪ್ಪು ಎಂದಿದ್ದಾರೆ.

ಮತೀಯ ಶಕ್ತಿಗಳ ವಿರುದ್ಧ ಬಾಬಾ ಸಾಹೇಬರು ಬೃಹತ್‌ ಹೋರಾಟ ನಡೆಸಿದ್ದಾರೆ.. ಒಂದು ಮತ ಒಂದು ಮೌಲ್ಯವನ್ನು ಜಾರಿ ಮಾಡಿದ ಕಾರಣವನ್ನು ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಮತದಾನದ ಹಕ್ಕನ್ನು ಪಡೆದಿದ್ದಾರೆ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಧರ್ಮದ ಹೆಸರಲ್ಲಿ ರಾಜಕೀಯ ದ್ವೇಷ ಹರಡುವ ಇಂತಹವರು. ತಮ್ಮ ಕೆಟ್ಟ ಪ್ರವೃತ್ತಿಗೆ ಕಡಿವಾಣ ಹಾಕಬೇಕು ಎಂದು ಹೇಳಿದ್ದಾರೆ. ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿ, ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು. ಆಗ ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯವಾಗುತ್ತದೆ. ಅಷ್ಟು ಪ್ರೀತಿ ಇದ್ದರೆ ನಿಮ್ಮ ಮನೆ, ಸೈಟ್ ಬರೆದುಕೊಡಿ ಎಂದು ಹೇಳಿದ್ದರು.

More articles

Latest article