ಮುಂಬೈ: ವಿಧಾನಸಭಾ ಚುನಾವಣೆ ನಡೆಯುತ್ತಿರುವ ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯಲ್ಲಿ ವ್ಯಾನ್‌ನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ
ರೂಪಾಯಿ 3.70 ಕೋಟಿಗೂ ಹೆಚ್ಚು ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಣ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಶುಕ್ರವಾರ ರಾತ್ರಿ ಕಾರ್ಯಾಚರಣೆಯನ್ನು ನಡೆಸಿದ್ದು, ಪಾಲ್ಗರ್ ಜಿಲ್ಲೆಯ ವಾಡಾದಲ್ಲಿ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು
ಇನ್‌ಸ್ಪೆಕ್ಟರ್ ದತ್ತ ಕಿಂದ್ರೆ ತಿಳಿಸಿದ್ದಾರೆ.
ತಪಾಸಣೆ ವೇಳೆಯಲ್ಲಿ ರೂಪಾಯಿ 3.70 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ವ್ಯಾನ್ ನಲ್ಲಿದ್ದ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಆದರೆ ಇವರು ಈ ನಗದು ಹಣಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳನ್ನು ನೀಡಿಲ್ಲ. ನವಿ ಮುಂಬೈ ಮೂಲದ ಕಂಪನಿಯಿಂದ ಪಾಲ್ಗರ್ ನ ವಿಕ್ರಮಗಡಕ್ಕೆ ಹಣವನ್ನು ತೆಗೆದುಕೊಂಡು ಹೋಗಲಾಗುತ್ತಿತ್ತು ಎಂದು ಚಾಲಕ ತಿಳಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಪ್ತಿ ಮಾಡಿದ ನಗದನ್ನು ಹೆಚ್ಚಿನ ತನಿಖೆಗೆ ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.