ಮಹಾರಾಷ್ಟ್ರ ಚುನಾವಣೆ: 3 ಲಕ್ಷ ರೂ.ಕೃಷಿ ಸಾಲ ಮನ್ನಾ, ಉಚಿತ ಬಸ್ ಪ್ರಯಾಣ- ಎಂವಿಎ ಗ್ಯಾರಂಟಿ ಘೋಷಣೆ

Most read

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ ಮುನ್ನ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು ಇಂದು ಚುನಾವಣಾ ಗ್ಯಾರಂಟಿಯನ್ನು ಬಿಡುಗಡೆ ಮಾಡಿದ್ದು, , 3 ಲಕ್ಷ ರೂ. ಕೃಷಿ ಸಾಲ ಮನ್ನಾ , ರಾಜ್ಯದ ಮಹಿಳೆಯರಿಗೆ ತಿಂಗಳಿಗೆ 3,000 ರೂ. ಮತ್ತು ರಾಜ್ಯ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಇನ್ನಿತರೆ ಭರವಸೆ ನೀಡಿದೆ.

ಮಹಾ ವಿಕಾಸ್ ಅಘಾಡಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ಮಹಾರಾಷ್ಟ್ರದಲ್ಲಿ ಕೃಷಿ ಸಮೃದ್ಧಿ ಯೋಜನೆಯಡಿಯಲ್ಲಿ 3 ಲಕ್ಷದವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ಚುನಾವಣಾ ಭರವಸೆಯಲ್ಲಿ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಎಂವಿಎ ಸರ್ಕಾರವು ರಾಜ್ಯದ ಪ್ರತಿ ನಿರುದ್ಯೋಗಿ ಯುವಕರಿಗೆ ಮಾಸಿಕ 4,000 ರೂಪಾಯಿ ಹಾಗೂ 25 ಲಕ್ಷ ರೂ.ವರೆಗಿನ ಆರೋಗ್ಯ ವಿಮೆ ಮತ್ತು ಉಚಿತ ಔಷಧಿಗಳ ಭರವಸೆ ನೀಡಲಾಗಿದೆ. ಮಹಿಳೆಯರಿಗೆ ಮೂರು ಸಾವಿರ ಹಣ ಹಾಗೂ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಜಾರಿ ಮಾಡಲಿದೆ ಎಂದು ಚುನಾವಣಾ ಗ್ಯಾರಂಟಿ ಬಿಡುಗಡೆಯ ಸಂದರ್ಭದಲ್ಲಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ನವೆಂಬರ್ 20ಕ್ಕೆ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

More articles

Latest article