ಬೆಳಗಾವಿ: ಕನ್ನಡ ಮಾತಾಡಿ ಎಂದು ಹೇಳಿದ್ದಕ್ಕೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣ ಖಂಡಿಸಿ ಬೆಳಗಾವಿ ಮಾತ್ರವಲ್ಲದೆ ರಾಜ್ಯಾದ್ಯಂತ ಕನ್ನಡಿಗರು ಪ್ರತಿಭಟನೆ ಮಾಡುತ್ತಿದ್ದಾರೆ. ಬೆಳಗಾವಿ ಗಡಿಯಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದ್ದು, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಸಾರಿಗೆ ಬಸ್ ಸಂಚಾರವನ್ನು ಮಹಾರಾಷ್ಟ್ರ ಸರ್ಕಾರ ಸ್ಥಗಿತಗೊಳಿಸಿದೆ.
ನನಗೆ ಮರಾಠಿ ಬರಲ್ಲ, ಕನ್ನಡದಲ್ಲಿ ಮಾತನಾಡಿ ಎಂದು ಹೇಳಿದ್ದಕ್ಕೆ ಬಸ್ ನಿರ್ವಾಹಕ ಮತ್ತು ಚಾಲಕರ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ್ದಾರೆ. ಮಾರಿಹಾಳ ಪೊಲೀಸ್ ಠಾಂಏ ಪೊಲೀಸರು ಮಾರುತಿ, ರಾಹುಲ್ ರಾಜು ನಾಯ್ಡು ಮತ್ತು ಬಾಳು ಸುರೇಶ್ ಗೊಂಜೇಕರ್ನನ್ನ ಬಂಧಿಸಿ ಹಿಂಡಲಗಾ ಜೈಲಿಗಟ್ಟಿದ್ದಾರೆ. ಈ ನಡುವೆ ಮಹಾರಾಷ್ಟ್ರ ಸರ್ಕಾರ ಕರ್ನಾಟಕಕ್ಕೆ ಬರುವ ಸಾರಿಗೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ. ಹೀಗಾಗಿ ಬೆಳಗಾವಿ ಗಡಿವರೆಗೂ ಮಾತ್ರ ಮಹಾರಾಷ್ಟ್ರ ಸಾರಿಗೆ ಬಸ್ಗಳು ಬರುತ್ತಿವೆ. ಆದರೆ ಕರ್ನಾಟಕದಿಂದ ಎಂದಿನಂತೆ ಮಹಾರಾಷ್ಟ್ರಕ್ಕೆ ಬಸ್ ಗಳು ತೆರಳುತ್ತಿವೆ.