ಜಮ್ಮು ಮತ್ತು ಕಾಶ್ಮೀರ, ಹರಿಯಾಣ ಚುನಾವಣೆ ಫಲಿತಾಂಶ ಬೆನ್ನಲ್ಲೇ ಈಗ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕ ಘೊಷಿಸಲು ಚುನಾವಣಾ ಆಯೋಗ ಇಂದು ಸಿದ್ದತೆ ನಡೆಸಿದೆ.
ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆ ವಿಚಾರವಾಗಿ ವಿವರವಾದ ಮಾಹಿತಿಯನ್ನು ಇಂದು ಮಂಗಳವಾರ 3:30ಕ್ಕೆ ಪ್ರಕಟಿಸುವುದಾಗಿ ತಿಳಿಸಿದೆ.
ಎರಡು ಅಸೆಂಬ್ಲಿಗಳಿಗೆ ಸಾರ್ವತ್ರಿಕ ಚುನಾವಣೆಗಳಲ್ಲದೆ, ವಿವಿಧ ಕಾರಣಗಳಿಂದ ತೆರವಾಗಿರುವ ಮೂರು ಲೋಕಸಭೆ ಮತ್ತು ಕನಿಷ್ಠ 47 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಯನ್ನೂ ಚುನಾವಣಾ ಆಯೋಗ ಘೋಷಿಸಬಹುದು.
ರಾಜ್ಯದ 288 ಸ್ಥಾನಗಳಲ್ಲಿ 158 ಸ್ಥಾನಗಳಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ. ಏಕನಾಥ್ ಶಿಂಧೆ ಅವರ ಶಿವಸೇನೆಗೆ 70 ಮತ್ತು ಅಜಿತ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ 50 ಸೀಟುಗಳನ್ನು ಅದು ನೀಡಿದೆ.