ಮುಂಬೈ: ಬಹು ನಿರೀಕ್ಷಿತ ಮಹಾರಾಷ್ಟ್ರ ವಿಧಾನಸಭೆಗೆ ನಡೆದ ಚುನಾವಣೆಯ ಮತಗಳ ಎಣಿಕೆ ಆರಂಭವಾಗಿದೆ. ಇಲ್ಲಿ 288 ಕ್ಷೇತ್ರಗಳಲ್ಲಿ 4,136 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದಾರೆ.
ಬಿಜೆಪಿ ನೇತೃತ್ವದ ಮಹಾಯುತಿ 135 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ ನೇತೃತ್ವದ ಎಂವಿಎ 130 ಕ್ಷೇತ್ರಗಳಲ್ಲಿ ಮುನ್ನೆಡೆ ಸಾಧಿಸಿದೆ.
ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ) ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮೈತ್ರಿಕೂಟ ಮಹಾಯುತಿ ಅಧಿಕಾರ ಹಿಡಿಯಲು ಸೆಣಸಾಟ ನಡೆಸಿವೆ.