ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಅಧಿಕಾರ ರಚಿಸುವುದು ಖಚಿತವಾಗಿದೆ. ಭರ್ಜರಿ ಬಹುಮತದತ್ತ ಮಹಾಯುತಿ ಸಾಗಿದ್ದು, 217 ರಲ್ಲಿ ಮನ್ನೆಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ನಾಯಕತ್ವದ ಎಂವಿಎ 58ರಲ್ಲಿ ಮಾತ್ರ ಮುನ್ನೆಡೆ ಕಾಯ್ದುಕೊಂಡಿದೆ. 288 ಕ್ಷೇತ್ರಗಳಿಗೆ ನಡೆದ ಚುನಾವಣೆ ನಡೆದಿತ್ತು. ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗುವ ಸಾಧ್ಯತೆಗಳಿವೆ.
ಜಾರ್ಖಂಡ್ ನ ವಿಧಾನಸಭೆಯ 81 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಜೆಎಂಎಂ ಮತ್ತು ಕಾಂಗ್ರೆಸ್ ಮೈತ್ರಿಕೂಟ 49 ರಲ್ಲಿ ಮುನ್ನೆಡೆ ಸಾಧಿಸಿದೆ. ಬಿಜೆಪಿ ನೇತೃತ್ವದ ಎನ್ ಡಿಎ 30 ಕ್ಷೇತ್ರಗಳಲ್ಲಿ ಮುನ್ನೆಡೆ ಕಾಯ್ದುಕೊಂಡಿದೆ.
ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ) ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮೈತ್ರಿಕೂಟ ಮಹಾಯುತಿ ಅಧಿಕಾರ ಹಿಡಿಯಲು ಸೆಣಸಾಟ ನಡೆಸಿವೆ.ಮತ್ತೊಂದು ಕಡೆ ಪ್ರತಿಪಕ್ಷಗಳಾದ ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ) ಮತ್ತು ಎನ್‌ಸಿಪಿ (ಶರದ್ ಪವಾರ್ ಬಣ) ಮೈತ್ರಿಕೂಟ ಮಹಾ ವಿಕಾಸ ಅಘಾಡಿ (ಎಂವಿಎ) ತೀವ್ರ ಪೈಪೋಟಿ ನೀಡಿದ್ದು ಅಧಿಕಾರಕ್ಕೆ ಬರುವ ಸಾಧ್ಯತೆಗಳನ್ನು ಅಲ್ಲಗಳೆಯಲಾಗದು. ಬಿಜೆಪಿ 149 ಸ್ಥಾನಗಳಲ್ಲಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 81 ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 59 ಸ್ಥಾನಗಳಲ್ಲಿ ಸ್ಪರ್ಧಿಸಿವೆ. ಪ್ರತಿಪಕ್ಷ ಬಣ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದಲ್ಲಿ ಕಾಂಗ್ರೆಸ್ 101, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) 95 ಮತ್ತು ಎನ್‌ಸಿಪಿ (ಶರದ್ ಪವಾರ್) 86 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.