ಮಹಾರಾಷ್ಟ್ರ ಕೌಶಲ್ಯ ವಿಶ್ವವಿದ್ಯಾಲಯದ ಹೆಸರನ್ನು ಪದ್ಮ ವಿಭೂಷಣ ರತನ್ ಟಾಟಾ ಕೌಶಲ್ಯ ವಿಶ್ವವಿದ್ಯಾಲಯ ಎಂದು ಬದಲಾಯಿಸಲು ಮಹಾರಾಷ್ಟ್ರ ಸಚಿವ ಸಂಪುಟ ನಿರ್ಧರಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಮಹಾರಾಷ್ಟ್ರ ಕೌಶಲ್ಯಾಭಿವೃದ್ಧಿ ಸಚಿವ ಮಂಗಲ್ ಪ್ರಭಾತ್ ಲೋಧಾ, ರತನ್ ಟಾಟಾ ಅವರನ್ನು ಗೌರವಿಸಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಮಹಾರಾಷ್ಟ್ರ ಕೌಶಲ್ಯ ಅಭಿವೃದ್ಧಿ ವಿಶ್ವವಿದ್ಯಾಲಯವನ್ನು ಇನ್ನು ರತನ್ ಟಾಟಾ ವಿಶ್ವವಿದ್ಯಾಲಯ ಎಂದು ಕರೆಯಲಾಗುತ್ತದೆ ಎಂದು ಹೇಳಿದ್ದಾರೆ.
ಇತ್ತ ಕೈಗಾರಿಕೋದ್ಯಮಿ ರತನ್ ಟಾಟಾಗೆ ಪ್ರತಿಷ್ಠಿತ ಭಾರತ ರತ್ನ ಪ್ರಶಸ್ತಿಯನ್ನು ನೀಡಬೇಕೆಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಸ್ತಾಪಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ವಿಧಾನಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ನೀತಿ ಸಂಹಿತೆ ಯಾವಾಗ ಬೇಕಾದರೂ ಜಾರಿಗೆ ಬರಬಹುದು ಇದರ ನಡುವೆಯೇ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ.