ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಆಸ್ಪತ್ರೆಗೆ ದಾಖಲು

Most read

ಮುಂಬೈ: ಭಾರಿ ಬಹುಮತವಿದ್ದರೂ ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಗೆ ನಾನಾ ರೀತಿಯ ಸರ್ಕಸ್‌ ನಡೆಯುತ್ತಿದೆ. ಮತ್ತೊಂದು ಕಡೆ ಮುಖ್ಯಮಂತ್ರಿ ಹುದ್ದೆ ರೇಸ್‌ ನಿಂದ ಹೊರಬಿದ್ದಿರುವ ನಿಯೋಜಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅನಾರೋಗ್ಯದಿಂದ ಥಾಣೆಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ತೀವ್ರ ಜ್ವರವಿದೆ ಎಂದು ವೈದ್ಯರು ಹೇಳಿದ್ದಾರೆ. ಈ ಹಿಂದೆ ಅವರು ಆರೋಗ್ಯ ಹದಗೆಟ್ಟಾಗ ದೆಹಲಿಯಿಂದ ನೇರವಾಗಿ ತಮ್ಮ  ಸ್ವಗ್ರಾಮಕ್ಕೆ ತೆರಳಿದ್ದರು. ವಿಶ್ರಾಂತಿ ಪಡೆದ ಬಳಿಕ ಮುಂಬೈಗೆ ಆಗಮಿಸಿದ್ದರು. ಆದರೆ ಅರೋಗ್ಯ ಮತ್ತಷ್ಟು ಹದಗೆಟ್ಟಿದ್ದು ಇಂದು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಡೆಂಗ್ಯೂ ಮತ್ತು ಮಲೇರಿಯಾ ಪರೀಕ್ಷೆ ಮಾಡಲಾಗಿದ್ದು, ವರದಿ ನೆಗೆಟಿವ್ ಬಂದಿದೆ. ಏಕನಾಥ್ ಶಿಂಧೆ ಜತೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಇದ್ದಾರೆ. ಏಕನಾಥ್ ಶಿಂಧೆ ಅವರ ರಕ್ತದಲ್ಲಿ ಪ್ಲೇಟ್​ಲೆಟ್​ ಕಡಿಮೆಯಾಗಿದೆ ಎಂದು ಮೂಲಗಳು ಹೇಳುತ್ತಿವೆ.. ಗಂಟಲು ಸೋಂಕು ಹಾಗೂ ನಿರಂತರವಾಗಿ ಆ್ಯಂಟಿಬಯೋಟಿಕ್ ಗಳನ್ನು ಸೇವಿಸುತ್ತಿದ್ದರಿಂದ ಅವರು ನಿತ್ರಾಣರಾಗಿದ್ದಾರೆ.

ಡಿಸೆಂಬರ್ 5 ರಂದು ಮಹಾರಾಷ್ಟ್ರದಲ್ಲಿ ನೂತನ ಮಹಾಯುತಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮುಂಬೈನ ಆಜಾದ್ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ನಾಳೆ ನಡೆಯಲಿರುವ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಮುಖ್ಯಮಂತ್ರಿ ಹೆಸರನ್ನು ಪ್ರಕಟಿಸಲಾಗುತ್ತದೆ. ಏಕನಾಥ ಶಿಂಧೆ ಉಪಮುಖ್ಯಮಂತ್ರಿ ಮತ್ತು ಮೂರು ಪ್ರಮುಖ ಖಾತೆಗಳಿಗೆ ಬೇಟಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ.

More articles

Latest article