Wednesday, May 22, 2024

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ನಿಧನ

Most read

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ಅವರು ಇಂದು (ಶುಕ್ರವಾರ) ಬೆಳಗ್ಗೆ ನಿಧನರಾಗಿದ್ದಾರೆ. 86 ವರ್ಷ ವಯಸ್ಸಿನ ಜೋಶಿ ಅವರು ಹೃದಯ ಸಂಬಂದಿ ಖಾಯಿಲೆಯಿಂದ ಫೆಬ್ರವರಿ 21 ರಂದು ಆಸ್ಪತ್ರೆಗೆ ದಾಖಲಾಗಿದ್ದರು.‌

ಮಾಜಿ ಲೋಕಸಭಾ ಸ್ಪೀಕರ್ ಆಗಿದ್ದ ಮನೋಹರ್‌ ಜೋಶಿ ಅವರ ಅಂತ್ಯಕ್ರಿಯೆಯನ್ನು ಪೂರ್ಣ ಸರ್ಕಾರಿ ಗೌರವಗಳೊಂದಿಗೆ ದಾದರ್ ಶಿವಾಜಿ ಪಾರ್ಕ್ ಚಿತಾಗಾರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮನೋಹರ ಜೋಶಿಯವರ ರಾಜಕೀಯ ಜೀವನ

ಜೋಶಿ ಅವರು 1995 ರಿಂದ 1999 ರವರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು1999 ರಿಂದ 2002 ರವರೆಗೆ ಭಾರೀ ಕೈಗಾರಿಕೆಗಳು ಮತ್ತು ಸಾರ್ವಜನಿಕ ಉದ್ಯಮಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. 2002 ರಿಂದ 2004 ರವರೆಗೆ ಲೋಕಸಭೆಯ ಸ್ಪೀಕರ್ ಹಾಗು 2006 ರಿಂದ 2012 ರವರೆಗೆ ರಾಜ್ಯಸಭಾ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

More articles

Latest article