ಮಹಿಷ ದಸರಾ ವಿರೋಧಿಸಿದ ಪ್ರತಾಪ್ ಸಿಂಹನಿಗೆ ರಾಮಮಂದಿರ ಪೂಜೆಗೆ ದಲಿತರಿಂದ ಬಹಿಷ್ಕರ

Most read

ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ಪ್ರತಿಷ್ಠಾಪನೆಯಾಗುತ್ತಿರುವ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಮೈಸೂರಿನ ಹಾರೋಹಳ್ಳಿಯ ಸ್ಥಳದಲ್ಲಿ ಇಂದು ಗುದ್ದಲಿ ಪೂಜೆ ನಡೆಯುತ್ತಿದೆ. ಈ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ (Prathap Simha) ಅವರಿಗೆ ಕೆಲ ಸ್ಥಳೀಯರು ಹಾಗೂ ದಲಿತ ನಾಯಕರು ಘೇರಾವ್ ಹಾಕಿ ದಲಿತ ವಿರೋಧಿ ಎಂದು ಕರೆದು ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ ಕಳುಹಿಸಿದ ಘಟನೆ ಮೈಸೂರು ತಾಲೂಕು ಹಾರೋಹಳ್ಳಿಯಲ್ಲಿ ನಡೆದಿದೆ.

ಆಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾಗುತ್ತಿರುವ ರಾಮಲಲ್ಲಾ ಮೂರ್ತಿಯ ಕೃಷ್ಣ ಶಿಲೆ ಕಲ್ಲು ಹಾರೋಹಳ್ಳಿ ಬಳಿಯ ಗಯಜ್ಜೇಗೌಡನಪುರದ ರಾಮದಾಸ್ ಅವರ ಜಮೀನಿನಲ್ಲಿ ಸಿಕ್ಕಿತ್ತು. ಈ ಜಾಗದಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅವರು ಈ ಹಿಂದೆ ತಿಳಿಸಿದ್ದರು.

ಹೀಗಾಗಿ ಇಂದು ಭೂಮಿಪೂಜೆ ಮತ್ತು ರಾಮನ ಪೂಜೆ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸಂಸದ ಪ್ರತಾಪ್ ಸಿಂಹ ಆಗಮಿಸಿದ್ದರು. ಈ ವೇಳೆ ಕೆಲ ಸ್ಥಳೀಯರು ಸಂಸದರನ್ನು ಘೇರಾವ್ ಹಾಕಿ ಮಹಿಷಾ ದಸರಕ್ಕೆ ವಿರೋಧ ನೆಪ ಹೇಳಿಕೊಂಡು ಅಪಮಾನ ಮಾಡಿ ದಲಿತ ವಿರೋಧಿ ಎಂದು ಕರೆದು ಕಾರ್ಯಕ್ರಮಕ್ಕೆ ಬರದಂತೆ ಅಡ್ಡಿಪಡಿಸಿದ್ದಾರೆ. ಇದರಿಂದ ದೈವಿಕ ಕಾರ್ಯಕ್ರಮಕ್ಕೆ ಬಂದ ಪ್ರತಾಪ್‌ ಸಿಂಹ ಪೂಜೆಯಲ್ಲಿ ಪಾಲ್ಗೊಳ್ಳದೇ ವಾಪಸ್ ಹೋಗಿದ್ದಾರೆ.

ಶಾಸಕ ಜಿ.ಟಿ. ದೇವೇಗೌಡ ಅವರು ಮನವೊಲಿಕೆಗೆ ಎಷ್ಟೇ ಪ್ರಯತ್ನ ಮಾಡಿದರೂ ಮಾತು ಕೇಳದ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಸ್ಥಳದಿಂದ ನಿರ್ಗಮಿಸಿದರು.

More articles

Latest article