ಪ್ರಧಾನಮಂತ್ರಿ ಹರಿಶ್ಚಂದ್ರನಲ್ಲವೇ ಹಾಗಾದ್ರೆ ಸುಪ್ರೀಂ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಯಾಗಲಿ : ಮಲ್ಲಿಕಾರ್ಜುನ ಖರ್ಗೆ ಆಗ್ರಹ

Most read

ಪ್ರಧಾನಮಂತ್ರಿ ಹರಿಶ್ಚಂದ್ರನ ಹಾಗೆ ನಾನು ತಿನ್ನಲ್ಲ, ತಿನ್ನಲು ಬಿಡುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ, ಇವತ್ತು ಸುಪ್ರೀಂ ಕೋರ್ಟ್ ನಿಂದ ಎಲ್ಲವೂ ಬಹಿರಂಗವಾಗಿದೆ ಎಂದು ಕಾಂಗ್ರೆಸ್ ರಾಷ್ಟೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟೀಕಿಸಿದ್ಧಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ,  ಸುಪ್ರೀಂ ಕೋರ್ಟ್ (Supreme Court) ಆದೇಶದಂತೆ ಭಾರತದ ಚುನಾವಣಾ ಆಯೋಗ (Election Commission of India) ಎಸ್‌ಬಿಐ (SBI)ಯಿಂದ ಪಡೆದ ಚುನಾವಣಾ ಬಾಂಡ್‌ (Electoral Bonds)ಗಳ ಮಾಹಿತಿಯು ಭಾರತೀಯ ಜನತಾ ಪಕ್ಷದ ಮುಖವಾಡವನ್ನು ಕಳಚಿದೆ. ಬಿಜೆಪಿಯು ಇ.ಡಿ. ಮತ್ತು ಐಟಿಗಳ ಮೂಲಕ ಬೆದರಿಕೆ ಒಡ್ಡಿ ದೇಣಿಗೆ ಸಂಗ್ರಹ ಮಾಡಿರುವುದು‌ ಸ್ಪಷ್ಟವಾಗಿದೆ. ಈ ಬಗ್ಗೆ ಸಮಗ್ರ ತನಿಖೆಗೆ ಆದೇಶ ನೀಡಬೇಕು. ಇವತ್ತು ಒಂದು ಮಹತ್ವದ ವಿಷಯ ದೇಶದ ಮುಂದೆ ಬಂದಿದೆ.

ಭಾರತೀಯ ಜನತಾ ಪಾರ್ಟಿಗೆ ಸುಮಾರು ಆರು ಸಾವಿರ ಕೋಟಿ ರೂ. ಅಂದರೆ ಶೇ50ರಷ್ಟು ದೇಣಿಗೆ ಸಂದಾಯವಾಗಿದೆ. ಇದರಲ್ಲಿ ದೇಣಿಗೆದಾರರು ಇಡಿ ಪ್ರಕರಣದಲ್ಲಿ ಸಿಲುಕಿದವರೇ ಹೆಚ್ಚಿದ್ದಾರೆ. ಅಂತವರನ್ನು ಹೆದರಿಸಿ ಮೋದಿ ಸರ್ಕಾರ ಹಣ ಪಡೆದಿದೆ. ಪ್ರಧಾನಿ ಮೋದಿ ಅವರು ಸತ್ಯ ಹರಿಶ್ಚಂದ್ರ ತರ ನಾನು ತಿನ್ನಲ್ಲ, ತಿನ್ನಲು ಬಿಡುವುದಿಲ್ಲ ( ‘ನಾ ಖಾವುಂಗಾ, ನಾ ಖಾನೆದೂಂಗಾ’ ) ಎಂದು ಹೇಳುತ್ತಾ ಬಿಜೆಪಿ ಹೇಗೆ ಹಣ ಮಾಡಿದೆ ಎಂಬುದು ಚುನಾವಣಾ ಬಾಂಡ್ ನಿಂದ ಬಯಲಾಗಿದೆ. ಈ ಕುರಿತು ಮೋದಿ ಅವರೇ ಉತ್ತರಿಸಬೇಕು ಎಂಧು ಆಗ್ರಹಿಸಿದ್ದಾರೆ.

 ಕೇಂದ್ರ ಮೋದಿ ಸರ್ಕಾರ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್ ಪಕ್ಷದ ಖಾತೆಗಳನ್ನು ಸ್ಥಗಿತಗೊಳಿಸಿದ್ದು, ಪಕ್ಷದ ಸುಮಾರು 300 ಕೋಟಿ ರೂ ಗಳನ್ನು ಬಳಸದಂತಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಚುನಾವಣೆ ಎದುರಿಸಲು ಹೇಗೆ ಸಾಧ್ಯ. ವಿರೋಧ ಪಕ್ಷಳಿಗೆ ಹಣ ಸಿಗಬಾರದು ಎಂಬುದು. ಹೀಗಾಗಿಯೇ ನಮ್ಮ ಅಕೌಂಟ್‌ಗಳನ್ನು ಬ್ಲಾಕ್‌ ಮಾಡಲಾಗಿದೆ. ಆದರೆ ಬಿಜೆಪಿಯ ಬ್ಯಾಂಕ್ ಖಾತೆಗಳು ಮಾತ್ರ ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. ಲೆವೆಲ್ ಪ್ಲೇಯಿಂಗ್ ಗ್ರೌಂಡ್ ಎಲ್ಲಿದೆ? ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ನಾನು ಒತ್ತಾಯಿಸುತ್ತೇನೆ. ಸತ್ಯ ಹೊರಬರದ ಹೊರತು ಅವರ ಖಾತೆಗಳನ್ನು ಸಹ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.

 ಸುದ್ದಿಗೋಷ್ಠಿಯಸ್ಸಿ ರಾಜ್ಯಸಭಾ ಸದಸ್ಯ ಅಜಯ್ ಮಾಕೇನ್, ಪವನ್ ಖೇರಾ, ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಲೀಂ ಅಹ್ಮದ್ ಅವರು ಉಪಸ್ಥಿತರಿದ್ದರು.

More articles

Latest article